Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 23 ಜನರಿಗೆ ಕೋವಿಡ್ ಸೋಂಕು ದೃಢ

06:20 PM Jun 09, 2020 | keerthan |

ಮಂಗಳೂರು: ಅನ್ಯ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರ ಕಾರಣಗಳಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇಂದು ಜಿಲ್ಲೆಯ 23 ಜನರಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 2010ಕ್ಕೆ ಏರಿಕೆಯಾಗಿದೆ.

Advertisement

ಇಂದಿನ 23 ಸೋಂಕಿತರಲ್ಲಿ ಇಬ್ಬರು ಮಹಾರಾಷ್ಟ್ರದಿಂದ ಜಿಲ್ಲೆಗೆ ಬಂದವರಾಗಿದ್ದಾರೆ. 19 ಮಂದಿ ಸೌದಿ ಅರೇಬಿಯಾ ದೇಶದಿಂದ ಬಂದವರಾಗಿದ್ದಾರೆ. ಉಳಿದ ಇಬ್ಬರು ದುಬೈ ದೇಶದಿಂದ ಜಿಲ್ಲೆಗೆ ಬಂದವರಾಗಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಟ್ಟು 10 ಮಂದಿ ಸೋಂಕಿನಿಂದ ಗುಣಮುಖರಾಗಿ ನಿಗಧಿತ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಒಟ್ಟು 85 ಮಂದಿ ಬಿಡುಗಡೆಯಾದಂತಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು ಆರು ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದರೆ ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.

ರಾಜ್ಯದಲ್ಲಿಂದು 161 ಜನರಿಗೆ ಸೋಂಕು ದೃಢವಾಗಿದ್ದು,  ಒಟ್ಟು ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆ ಕಂಡಿದೆ. ಇಂದು ಒಟ್ಟು 164 ಜನರು ಗುಣಮುಖರಾಗಿದ್ದು, ಒಟ್ಟು 2605 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 66 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next