ಬೆಂಗಳೂರು: ರಾಜ್ಯದಲ್ಲಿ ಸೋಮವಾರ 236 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 7ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 121, ದ.ಕ. 19, ಹಾಸನ 10, ಕೊಡಗು 35, ಮೈಸೂರು ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲಾಗಿವೆ. ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಕಲಬುರಗಿ, ಮಂಡ್ಯ, ತುಮಕೂರು, ಉಡುಪಿ, ಉ.ಕ. ಸೇರಿದಂತೆ ಇತರೆ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳು ವರದಿಯಾಗಿದೆ. ಬೆಂಗಳೂರು ನಗರದಲ್ಲಿ 4, ಬೆಳಗಾವಿ, ಬಳ್ಳಾರಿ, ಕೋಲಾರ ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು 3 ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ:ಕಾಶಿ ವಿಶ್ವನಾಥ ಕಾರಿಡಾರ್ ಲೋಕಾರ್ಪಣೆ: ಹೂಮಳೆ.. ಹೂಮಳೆ.. ಹೂಗಳ ಸುರಿಮಳೆ!
ರಾಜ್ಯಾದ್ಯಂತ ಒಟ್ಟು 7,236 ಸಕ್ರಿಯ ಪ್ರಕರಣಗಳಿವೆ. 321 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.