ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 238 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕಿನಿಂದಾಗಿ ಮೂವರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 153, ದ.ಕನ್ನಡ 19, ಮೈಸೂರು 15, ಕೊಡಗು ಜಿಲ್ಲೆಯಲ್ಲಿ 13 ಪ್ರಕರಣ ದಾಖಲಾಗಿದೆ. ಉಳಿದಂತೆ ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗಾ,ಗದಗ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದೆಹಲಿ: ಮಹಿಳೆಯನ್ನು ಸ್ಕೂಟರ್ ನಲ್ಲೇ ರಸ್ತೆಯುದ್ದಕ್ಕೂ ಎಳೆದೊಯ್ದ ಕಳ್ಳರು
ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಮೈಸೂರಿನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಒಟ್ಟು 7076ಸಕ್ರಿಯ ಪ್ರಕರಣಗಳಿವೆ. 307 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.