ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಇಂದು ಬಹುತೇಕ ಅಂತಿಮಗೊಳ್ಳಲಿದೆ ಎಂದು ಹೇಳಲಾಗಿದ್ದು , ನಾಮಪತ್ರ ಸಲ್ಲಿಕೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎರಡು ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು, 24 ಗಂಟೆಗಳಲ್ಲಿ ಪಕ್ಷದ ಅಭ್ಯರ್ಥಿ ಯಾರೆಂದು ಪ್ರಕಟಿಸಲಾಗುವುದು. ಇಲ್ಲಿ ಯಾರೂ ಹೆದರುವುದಿಲ್ಲ, ಯಾರೂ ಓಡಿಹೋಗುವುದಿಲ್ಲ ಎಂದು ಪಕ್ಷದ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕ್ರಮವಾಗಿ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದೆ. 2019 ರಲ್ಲಿ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅನಿರೀಕ್ಷಿತ ಸೋಲನ್ನು ಕಂಡಿದ್ದ ರಾಹುಲ್ ಗಾಂಧಿ ಮತ್ತೆ ಅಲ್ಲಿಂದ ಸ್ಪರ್ಧಿಸುವ ನಿರೀಕ್ಷೆಯಿದೆ ಎನ್ನಲಾಗಿದ್ದು ಅಲ್ಲದೆ ಪ್ರಸ್ತುತ ಕ್ಷೇತ್ರವಾದ ಕೇರಳದ ವಯನಾಡ್ ನಲ್ಲೂ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು ರಾಯ್ಬರೇಲಿ ವಿಚಾರಕ್ಕೆ ಬರುವುದಾದರೆ 2004 ರಿಂದ ಸೋನಿಯಾ ಗಾಂಧಿಯವರು ನಡೆಸುತ್ತಿರುವ ರಾಯ್ಬರೇಲಿಯಲ್ಲಿ, ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ರಾಜಕೀಯಕ್ಕೆ ಪ್ರವೇಶವನ್ನು ನಿರೀಕ್ಷಿಸಲಾಗಿದೆ, ಆದಾಗ್ಯೂ, ಪಕ್ಷದೊಳಗಿನ ಚರ್ಚೆಗಳು ಮೂವರು ಗಾಂಧಿ ಕುಟುಂಬದ ಸದಸ್ಯರನ್ನು ಸಂಸತ್ತಿನಲ್ಲಿ ಕಣಕ್ಕಿಳಿಸಲು ಹಿಂಜರಿಯುತ್ತಿವೆ ಎಂದು ಹೇಳಲಾಗುತ್ತಿವೆ, ಈ ಎಲ್ಲದಕ್ಕೂ ಇಂದು ಅಥವಾ ನಾಳೆ ಅಂತಿಮ ನಿರ್ಧಾರ ಹೊರ ಬೀಳಲಿದೆ.
ಇದನ್ನೂ ಓದಿ: ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ