Advertisement

24 ಜನರಿಗೆ ಕೋವಿಡ್‌ ಸೋಂಕು

03:30 PM Jan 14, 2021 | Team Udayavani |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ಗೆ ಸಂಬಂ ಧಿಸಿದಂತೆ ಬುಧವಾರದ ವರದಿಯಲ್ಲಿ 24 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,493ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‌ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು 5 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Advertisement

ಇದನ್ನೂ ಓದಿ:ರಸ್ತೆ ದುರಸ್ತಿ ಮಾಡಿದ್ದರೆ ದಾಖಲೆ ಕೊಡಿ : ಸಭೆಯಲ್ಲಿ ಅಧಿಕಾರಿಗಳಿಗೆ ತಾಪಂ ಸದಸ್ಯರ ಒತ್ತಾಯ

ಬುಧವಾರ ಒಟ್ಟು 2335 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಈವರೆಗೆ 68 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 14,344 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 81 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂ ಧಿಸಿದಂತೆ ಒಟ್ಟು 1,15,245 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 2,49,375 ಜನರ ಮಾದರಿ ಸಂಗ್ರಹಿಸಲಾಗಿದ್ದು, 2,32,938 ಜನರ ವರದಿ ನೆಗೆಟಿವ್‌ ಬಂದಿದೆ, ಉಳಿದ 1338 ಜನರ ವರದಿ ಬರುವುದು ಬಾಕಿ ಇದೆ. 606 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ತುಳಸಿರಂಗನಾಥ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next