Advertisement

Tragedy: ಕೆಲಸಕ್ಕೆ ಹೊರಟಿದ್ದ ಯುವತಿಗೆ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

02:31 PM Jun 27, 2024 | Team Udayavani |

ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರು ಹೃದಯಾಘಾತಕ್ಕೊಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.

Advertisement

ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ಇವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ತೆರಳಲೆಂದು ಮನೆಯಲ್ಲಿ ತಯಾರಿ ನಡೆಸುತ್ತಿದ್ದರು. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Kempegowda Jayanthi: ಡಿಕೆಶಿಗೆ CM ಸ್ಥಾನ ಬಿಟ್ಟುಕೊಡಿ; ಸಿದ್ದರಾಮಯ್ಯಗೆ ಸ್ವಾಮೀಜಿ ಮನವಿ

Advertisement

Udayavani is now on Telegram. Click here to join our channel and stay updated with the latest news.

Next