ಉಡುಪಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೆನಪಿನಲ್ಲಿ ಆಯೋಜಿಸಿರುವ ಅಟಲ್ ಉತ್ಸವದ ಅಂಗವಾಗಿ ನಗರ ಮತ್ತು ಗ್ರಾಮಾಂತರ ಬಿಜೆಪಿ ನೇತೃತ್ವದಲ್ಲಿ ಎಂಜಿಎಂ ಮೈದಾನದಲ್ಲಿ ಡಿ. 24ರಂದು ನಡೆಯಲಿರುವ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಪ್ರೋ ಕಬಡ್ಡಿ ಪಂದ್ಯಾಟದ ಉದ್ಘಾಟನೆಗೆ ಕೇಂದ್ರದ ಯುವ ವ್ಯವಹಾರ ಮತ್ತು ಕ್ರೀಡಾ, ಮಾಹಿತಿ ತಂತ್ರಜ್ಞಾನ ಹಾಗೂ ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಆಹ್ವಾನಿಸಲಾಯಿತು.
Advertisement
ಶಾಸಕ ಕೆ. ರಘುಪತಿ ಭಟ್ ಮತ್ತು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅವರು ಹೊಸದಿಲ್ಲಿಯಲ್ಲಿ ಸಚಿವರನ್ನು ಭೇಟಿಯಾಗಿ ಉದ್ಘಾಟನೆಗೆ ಆಗಮಿಸುವಂತೆ ಕೋರಿದರು. ಸಚಿವರು ಭಾಗವಹಿಸುವ ಭರವಸೆ ನೀಡಿದ್ದಾರೆ.