ಒಟ್ಟು 20 ಪ್ರವಾಸಿ ಸ್ಥಳ ಗುರುತಿಸಿ 25 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
Advertisement
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.20 ಪ್ರವಾಸಿ ತಾಣಗಳಲ್ಲಿ ಬಳ್ಳಾರಿಯ ಹಂಪಿ ಸಹ ಸೇರಿದೆ ಎಂದು ಹೇಳಿದರು.