ಮಧ್ಯಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಸುಮಾರು ಇಪ್ಪತ್ತೈದು ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಕೆಲವರ ಸ್ಥಿತಿ ಗಂಭೀರವಾಗಿದ್ದಾರೆ ಎಂದು ಹರ್ದಾ ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಷಿ ಗಾರ್ಗ್ ಮಾಹಿತಿ ನೀಡಿದ್ದಾರೆ.
ಇನ್ನೂ ಹಲವು ಮಂದಿ ಕಾರ್ಖಾನೆ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು , ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: Biscuit Row: ನಾಯಿ ತಿನ್ನದ ಬಿಸ್ಕಿಟ್ ಕಾರ್ಯಕರ್ತನಿಗೆ ನೀಡಿದ ರಾಹುಲ್… : ವಿಡಿಯೋ ವೈರಲ್