ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ನೇನೆ (54) ಅವರು ಇನ್‌ಸ್ಟಾ ಗ್ರಾಂನಲ್ಲಿ ಹೊಂದಿರುವ ಖಾತೆಗೆ 25 ಲಕ್ಷ ಮಂದಿ ಫಾಲೋವರ್ಸ್ ಇದ್ದಾರೆ. ಈ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಮಾಧುರಿ, ಅಭಿಮಾನಿಗಳು ಮತ್ತು ಹಿತೈಶಿಗಳ ಹಾರೈಕೆಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
“25 ಲಕ್ಷ ಮಂದಿಯ ಸದೃಢ ಬಲ ಇದೆ. ಪ್ರೋತ್ಸಾಹ ಮತ್ತು ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ವಿಕ್ರಾಂತ್ ರೋಣನ ಬೆಡಗಿ ನಟಿ Neetha Ashok ಬ್ಯೂಟಿಫುಲ್ ಫೋಟೋ ಗ್ಯಾಲರಿ
1980-1990ರ ಅವಧಿಯಲ್ಲಿ ಜನಪ್ರಿಯ ನಟಿಯಾಗಿದ್ದ ಅವರು, ತೇಝಾಬ್, ದಿಲ್, ಸಾಜನ್, ಹಮ್ ಆಪ್ ಕೆ ಹಿ ಕೌನ್ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಶೀಘ್ರದಲ್ಲಿಯೇ ಅವರು ನೆಟ್‌ಫ್ಲಿಕ್ಸ್‌ನಲ್ಲಿ “ಫೈಂಡಿಂಗ್ ಅನಾಮಿಕಾ’ ಎಂಬ ಕಾರ್ಯಕ್ರಮದಲ್ಲಿಕಾಣಿಸಿಕೊಳ್ಳಲಿದ್ದಾರೆ.