Advertisement

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

10:58 AM Nov 27, 2024 | Team Udayavani |

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಮಹಿಳೆಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ವನ್ನಾರಪೇಟೆ ನಿವಾಸಿ ಶಾಂತಿ (30) ಬಂಧಿತೆ. ಆರೋಪಿಗಳಿಂದ 25 ಲಕ್ಷ ರೂ. ಮೌಲ್ಯದ 229 ಗ್ರಾಂ ಚಿನ್ನಾಭರಣ, 21,41 ಗ್ರಾಂ ವಜ್ರದ ಆಭರಣ ಹಾಗೂ 37.28 ಗ್ರಾಂ ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿತೆ ಶಾಂತಿಗೆ ಈಗಾಗಲೇ ಮದು ವೆ ಯಾಗದ್ದು, ಮಕ್ಕಳು ಇದ್ದು, ಮೇಕಪ್‌ ಆರ್ಟಿಸ್ಟ್‌ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಮಾಲಿಕರ ವಿಶ್ವಾಸಗಳಿಸಿ ಹಂತ-ಹಂತವಾಗಿ ಮನೆಯಲ್ಲಿದ್ದ ಚಿನ್ನಾಭರಣ, ವಜ್ರ ಆಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿದ್ದಳು. ಇತ್ತೀಚೆಗೆ ದೂರುದಾರರು ಮನೆಯ ಬೀರು ಪರಿಶೀಲಿಸಿ ದಾಗ ಚಿನ್ನಾಭರಣ ಕಳವು ಆಗಿರುವುದು ಗೊತ್ತಾಗಿ, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅನುಮಾನದ ಮೇರೆಗೆ ಶಾಂತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ದಾಗ ತಪ್ಪೊಪ್ಪಿಕೊಂಡಿದ್ದಾಳೆ. ನಂತರ ಸಂಪಂಗಿರಾಮ ನಗರದ ಪರಿಚಯಸ್ಥ ಗಿರವಿ ಅಂಗಡಿಯಲ್ಲಿ ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಆಕೆಗೆ ಠಾಣಾ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next