Advertisement
ಜಯನಗರದ ಆರ್‌ಜಿಯುಎಚ್‌ಎಸ್‌ಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ಬಳಿಕ ಮಾತನಾಡಿದ ಅವರು, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 25ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಹೀಗಾಗಿ ಮುಂದಿನ ವರ್ಷದಿಂದ ವಿವಿಧ ವಿಭಾಗಗಳಲ್ಲಿ ಅವಶ್ಯವಿರುವ ಕೋರ್ಸ್‌ಗಳನ್ನು ಚರ್ಚಿಸಿ ಆರಂಭಿಸಲಾಗುವುದು ಎಂದು ಹೇಳಿದರು. ಕುಲಪತಿಗಳು ಈಗಾಗಲೇ 23 ಕೋರ್ಸ್ ಗಳನ್ನು ಸಿದ್ಧಪಡಿಸಿದ್ದಾರೆ.
Related Articles
Advertisement
ನಾಲ್ಕೈದು ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶ ಪ್ರಕಟವಾಗದ ಹಿನ್ನೆಲೆ ಯಲ್ಲಿ ವಿದ್ಯಾರ್ಥಿವೇತನ ಸಿಗುತ್ತಿಲ್ಲವೆಂದು ವಿದ್ಯಾರ್ಥಿಗಳು ಪರದಾಡುತ್ತಿರುವುದು ಗಮನಕ್ಕೆ ಬಂದಿದೆ. ಶೀಘ್ರವೇ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದರು. ಫಲಿತಾಂಶ ಪ್ರಕಟವಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು ಸೋಮವಾರ ಸಚಿವರನ್ನು ಭೇಟಿ ಮಾಡಿ ಅಹವಾಲು ನೀಡಿದ್ದರು.
ವೈದ್ಯ ಕೋರ್ಸ್ ಶುಲ್ಕ ನಿಗದಿಯಾಗಿಲ್ಲ: ವೈದ್ಯಕೀಯ ಕೋರ್ಸ್‌ಗಳಿಗೆ ಶುಲ್ಕ ಹೆಚ್ಚಳ ಮಾಡುವ ಸಂಬಂಧ ಧಾರ್ಮಿಕ ಮತ್ತು ಅಲ್ಪಸಂಖ್ಯಾತ ವಿದ್ಯಾಸಂಸ್ಥೆಗಳ ಜತೆ ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಶುಲ್ಕ ನಿಯಂತ್ರಣ ಸಮಿತಿ ಕೂಡ ರಚನೆ ಮಾಡಲಾಗುತ್ತಿದೆ. ವಾರದೊಳಗೆ ಸಮಿತಿ ವರದಿ ನೀಡಲಿದ್ದು, ಬಳಿಕ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.