Advertisement

ಪುಣೆ : ಶಿವಾಜಿ ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ; 25 ಮಳಿಗೆ ಭಸ್ಮ

08:35 PM Mar 16, 2021 | Team Udayavani |

ಪುಣೆ: ನಗರದ ಹಳೆಯ, ಹಣ್ಣು ಮತ್ತು ತರಕಾರಿ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 25 ಮಳಿಗೆಗಳು ಸುಟ್ಟು ಭಸ್ಮವಾಗಿವೆ.

Advertisement

ಕಂಟೋನ್ಮೆಂಟ್‌ ಏರಿಯಾದಲ್ಲಿರುವ ಶಿವಾಜಿ ಮಾರುಕಟ್ಟೆಯಲ್ಲಿ ಮುಂಜಾನೆ 4ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಿಂದಾಗಿ ಯಾವುದೇ ಸಾವುನೋವು ವರದಿಯಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಬೆಂಕಿ ಆವರಿಸಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದ ದಳದ 9  ಟ್ಯಾಂಕರ್‌ಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಗೆ ಮುಂದಾದವು. ಕೇವಲ ಒಂದೂವರೆ ಗಂಟೆಯಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಫೈರ್‌ ಬ್ರಿಗೇಡ್‌ ಯಶಸ್ವಿಯಾಗಿದೆ. ಘಟನೆಯಲ್ಲಿ ಸುಮಾರು 25 ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಅಗ್ನಿ ಅವಘಡಕ್ಕೆ ಯಾವುದೇ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ :ಹಿಂದೂ ವ್ಯಕ್ತಿಗೆ ಮುಸ್ಲಿಂ ಸಂಪ್ರದಾಯದಲ್ಲಿ ಅಂತ್ಯಸಂಸ್ಕಾರ! ಹೈ ಕೋರ್ಟ್ ಮೆಟ್ಟಿಲೇರಿದ ಪತ್ನಿ

Advertisement

 

Advertisement

Udayavani is now on Telegram. Click here to join our channel and stay updated with the latest news.

Next