Advertisement

ಸರ್ಕಾರಿ ಕಚೇರಿಗಳಿಗಾಗಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಾಣ: ಗೋವಿಂದ ಕಾರಜೋಳ

04:53 PM Aug 27, 2020 | keerthan |

ಬೆಂಗಳೂರು: ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು  ಒಂದೇ ಸೂರಿನಡಿ ತರುವ ಉದ್ದೇಶದಿಂದ ಆನಂದ್ ರಾವ್ ಸರ್ಕಲ್ ಬಳಿ 25 ಮಹಡಿಗಳ ಟ್ವಿನ್ ಟವರ್ ನಿರ್ಮಿಸಲು ಪ್ರಸ್ತಾವನೆಯನ್ನು ಸಿದ್ದಪಡಿಪಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಹೇಳಿದರು.

Advertisement

ವಿಧಾನಸೌಧದಲ್ಲಿಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಈ ಪ್ರಸ್ತಾವನೆಯ ಪ್ರಾತ್ಯಕ್ಷಿಕೆಯ ಮೂಲಕ ಚರ್ಚಿಸಿದ ಅವರು, ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮ (ಎನ್‍ಬಿಸಿಸಿ)ವು ಪ್ರಸ್ತಾವನೆಯನ್ನು ಸಿದ್ದಪಡಿಸಿದೆ. ಎನ್ ಬಿಸಿಸಿಯು ಡಿಪಿಎಆರ್ ಅನ್ನು ಸಿದ್ದಪಡಿಸಲಿದೆ ಎಂದರು.

ಒಡಂಬಡಿಕೆ ಕರಡು ಪ್ರತಿಯನ್ನು ಸಿದ್ದಪಡಿಸಿ ಆರ್ಥಿಕ ಇಲಾಖೆ ಹಾಗೂ ಕಾನೂನು ಇಲಾಖೆಯ ಸಹಮತಿಯೊಂದಿಗೆ ಅನುಮೋದನೆ ಪಡೆಯಬೇಕು. ಈ ಪ್ರಸ್ತಾವನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸಲು ಮುಂದಿನ 15 ದಿನಗಳೊಳಗೆ ಸಚಿವ ಸಂಪುಟದ ಅನುಮೋದನೆ ಪಡೆಯಲು ಕ್ರಮಕೈಗೊಳ್ಳಬೇಕು. ಒಡಂಬಡಿಕೆಯ ಕರಡು ಅನ್ನು ಸಚಿವ ಸಂಪುಟದ ಅನುಮೋದನೆ ಪಡೆಯುವಂತೆ ಕ್ರಮಕೈಗೊಳ್ಳಬೇಕು. ಈ ಟ್ವಿನ್ ಟವರ್ ನಿರ್ಮಾಣದಿಂದ ಬಾಡಿಗೆ ಕಟ್ಟಡಗಳಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಬರಲಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದ ಸಾರ್ವಜನಿಕರು ಸುಲಲಿತವಾಗಿ ಏಕಕಾಲದಲ್ಲೇ ತಮಗೆ ಅಗತ್ಯವಿರುವ ಕಚೇರಿಗಳಿಗೆ ಭೇಟಿಯಾಗಿ ಸೇವೆಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ವಿಶ್ವನಾಥ್ ಸತ್ಯ ಹೇಳಿದ್ದಾರೆ, ಟಿಪ್ಪು ಬಗ್ಗೆ ಶೃಂಗೇರಿ ಶ್ರೀಗಳ ಬಳಿ ಕೇಳಿ: ಸಿಎಂ ಇಬ್ರಾಹಿಂ

ಎನ್‍ಬಿಸಿಸಿಯ ಡಿಜಿಎಂ ವೇಣುಗೋಪಾಲ್ ಹಾಗೂ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಗುರುಪ್ರಸಾದ್ ಪ್ರಸ್ತಾವನೆ ಕುರಿತು ವಿಸ್ತೃತವಾಗಿ ವಿವರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next