Advertisement

ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ- ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಅಶೋಕ್‌ ಆಗ್ರಹ

11:29 PM Dec 20, 2023 | Team Udayavani |

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಕೊಡಬೇಕು ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ಸರಕಾರಕ್ಕೆ ವಿಪಕ್ಷದ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು.

Advertisement

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಹಿಂದೆ ಯಡಿಯೂರಪ್ಪ ನೇತೃತ್ವದಲ್ಲಿ ನಮ್ಮ ಸರ್ಕಾರ ಎನ್‌ಡಿಆರ್‌ಎಫ್ ಪರಿಹಾರಕ್ಕಿಂತ ಹೆಚ್ಚು ಪರಿಹಾರ ಕೊಡಲಾಗಿತ್ತು. ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ಸರ್ಕಾರ ಇದ್ದಾಗ ಎಷ್ಟು ಕೊಟ್ಟಿತ್ತು? ಪ್ರಧಾನಿ ಮೋದಿ ಸರಕಾರ ಎಷ್ಟು ಕೊಟ್ಟಿದೆ ಎಂಬುದನ್ನೆಲ್ಲಾ ಚರ್ಚಿಸಿದ್ದೇವೆ. ಆದರೆ, ಸಿಎಂ ಸಿದ್ದರಾಮಯ್ಯರಿಂದ ಸೂಕ್ತ ಉತ್ತರವೇ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣದಿಂದ ರೈತರಿಗೆ ತಲಾ 2 ಸಾವಿರ ರೂ. ಪರಿಹಾರ ಘೋಷಿಸಿದ ಸರಕಾರ, ಇದುವರೆಗೆ ಕೊಟ್ಟಿಲ್ಲ. ಫ್ರೂಟ್ಸ್‌ ತಂತ್ರಾಂಶದಲ್ಲಿ ಶೇ. 40ರಷ್ಟು ರೈತರೂ ನೋಂದಣಿ ಮಾಡಿಕೊಂಡಿಲ್ಲ. ಅದರ ಬದಲು ರೈತರ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆ ಮಾಡಲು ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದರು.
ಷರತ್ತು ವಿಧಿಸಿದೆ

ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿರುವ ಸರಕಾರ, ಅಸಲು ಕಟ್ಟಿದ್ದರೆ ಮಾತ್ರ ಎಂಬ ಷರತ್ತು ವಿಧಿಸಿದೆ. ಎಲ್ಲದರಲ್ಲೂ ಜನರನ್ನು ವಂಚಿಸುವ ನೀತಿಯನ್ನೇ ಸರ್ಕಾರ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಸಣ್ಣ-ಪುಟ್ಟ ಗೊಂದಲ ಸಹಜ
ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಸಣ್ಣಪುಟ್ಟ ಗೊಂದಲಗಳು ಸಹಜ. ಗೊಂದಲ ಇರಬಾರದೆಂಬ ಕಾರಣಕ್ಕಾಗಿಯೇ ಬಿಜೆಪಿ-ಜೆಡಿಎಸ್‌ ಸೇರಿ ಸಮಿತಿ ಮಾಡಿಕೊಂಡಿದ್ದೇವೆ. ಅದರಂತೆ ನಡೆದುಕೊಳ್ಳುತ್ತೇವೆ. ಯತ್ನಾಳ್‌ ಅವರು ವರಿಷ್ಠರ ಭೇಟಿಗೆ ತೆರಳಿದ್ದಾರೆ. ಆ ಬಗ್ಗೆ ಹೆಚ್ಚಿಗೆ ಏನೂ ಹೇಳುವುದಿಲ್ಲ ಎಂದು ಅಶೋಕ್‌ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next