Advertisement
ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರಕಾರವಾಗಲಿ ನೀಡಲಿಲ್ಲ. ಕೆಲವು ಮೂಲಗಳ ಪ್ರಕಾರ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಇಷ್ಟೊಂದು ಸೈನಿಕರನ್ನು ಈ ಹಿಂದೆ ನಿಯೋಜಿಸಲಾಗಿಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ವೇಳೆ ಕಾಶ್ಮೀರದ ರಾಜ್ಯ ವಿಧಾನ ಸಭೆಯ ಚುನಾವಣೆಯನ್ನು ಆದಷ್ಟು ಬೇಗ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ ಅವರೂ ಒಮರ್ ಅಬ್ದುಲ್ಲಾ ಜತೆ ತೆರಳಿದ್ದರು.