ಶಿವಮೊಗ್ಗ: ತಾಲೂಕಿನ ಚೋರಡಿಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಭಾನುವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement
ಗ್ರಾಮದ ನಿವಾಸಿ ಜ್ಯೋತಿ(25), ಸಾನ್ವಿ (2) ಹಾಗೂ ಕುಶಾಲ್ (1) ಮೃತರು. ಜ್ಯೋತಿ ತನ್ನಿಬ್ಬರು ಮಕ್ಕಳಿಗೆ ನೇಣು ಬಿಗಿದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಯೋತಿ ಅವರಿಗೆ ಮದುವೆಯಾಗಿ ಐದು ವರ್ಷಗಳಾಗಿತ್ತು. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂಸಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.