Advertisement
ಯುರೋಪ್ ಪ್ರವಾಸ ಮುಗಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಚ್ಡಿಕೆ ಸುದ್ದಿಗಾರರ ಜತೆಗೆ ಮಾತನಾಡಿ, ಕಾಂಗ್ರೆಸ್ ಈಸ್ಟ್ ಇಂಡಿಯಾ ಕಂಪೆನಿಯ ರೀತಿ ರಾಜ್ಯವನ್ನು ಲೂಟಿ ಮಾಡುತ್ತಿದೆ. ಪೊಲೀಸ್ ವರ್ಗಾವಣೆಯಲ್ಲಿ ವೈಎಸ್‌ಟಿ ದಂಧೆಕೋರರು ಶಾಮೀಲಾಗಿದ್ದಾರೆ . ಬಿಡಿಎ ಅಧಿಕಾರಿಗಳಿಂದಲೂ ಹಣಕ್ಕೆ ಬೇಡಿಕೆ ಇಡಲಾಗಿದೆ. ದಿಲ್ಲಿಗೆ ಈ ಹಣ ಕಳಿಸಬೇಕು, ಕೊನೆಪಕ್ಷ 250 ಕೋ. ರೂ. ಕಲೆಕ್ಷನ್ ಆಗಬೇಕೆಂದು ಅಧಿಕಾರಿಯೊಬ್ಬರಿಗೆ ಮಹಾನುಭಾವರು ತಾಕೀತು ಮಾಡುತ್ತಾರೆ. ದುಡ್ಡು ಯಾರಿಗೆ ಸೇರಬೇಕು ಅವರ ಪಟ್ಟಿ ಕೊಡುತ್ತೇವೆ, ಅವರಿಗೆ ನೇರವಾಗಿ ದುಡ್ಡು ತಲುಪಿಸಿ ಎಂದು ಹೇಳುತ್ತಾರಂತೆ. ನಾನು ಯುರೋಪ್‌ನಲ್ಲಿ ಇದ್ದಾಗಲೇ ಈ ಬಗ್ಗೆ ಮಾಹಿತಿ ಬಂತು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮಿಷನ್‌ಗೆ ಬೇಡಿಕೆ ಮಾಡುತ್ತಿ¨ªಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಸಚಿವರ ಚೇಲಾಗಳು ತಾಕೀತು ಮಾಡಿ¨ªಾರೆ. ಇವರು ಹೋಗಿ ದಿಲ್ಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆಂದು ರಾಹುಲ್ ಗಾಂಧಿಗೆ ಭರವಸೆ ನೀಡುತ್ತಾರೆ. ಇಂಥವರಿಂದ ಪಾರದರ್ಶಕ ಆಡಳಿತ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
Related Articles
ನಾನು ಪ್ರವಾಸ ಹೋಗಿದ್ದು ಯುರೋಪ್ ದೇಶಗಳಿಗೆ. ನನ್ನ ಕುಟುಂಬ ಸದಸ್ಯರು, ಸಹೋದರ, ಸಹೋದರಿಯರ ಜತೆ ತೆರಳಿ¨ªೆ. ಆದರೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಹೋಗಿ ಸರಕಾರ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆಂದು ವದಂತಿ ಹಬ್ಬಿಸಿದರು. ಇದು ನಮ್ಮ ರಾಜ್ಯದ ಬೇಹುಗಾರಿಕೆ ಇಲಾಖೆ ಕೆಲಸ ಮಾಡುತ್ತಿರುವ ರೀತಿ ಎಂದು ವ್ಯಂಗ್ಯವಾಡಿದರು.
ಬಾಕ್ಸ್ ಸುದ್ದಿ
Advertisement
ಸಿಎಂ ಸಿದ್ದರಾಮಯ್ಯ ತಿರುಗೇಟು ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಆ್ಯಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಪೆನ್ ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿದರೆ? ಪೆನ್ ಡ್ರೈವ್ ಇದ್ದರಲ್ಲವೇ ಹೊರಗೆ ಬಿಡುವುದು ಎಂದು ವ್ಯಂಗ್ಯವಾಡಿದರು. ನಮ್ಮ ಅಣ್ಣ ಮಾತನಾಡುತ್ತಾ ಇರಬೇಕು. ತಮ್ಮ ಕೇಳುತ್ತಾ ಇರಬೇಕು. ಪಾಪ, ರೆಸ್ಟ್ ತಗೊಂಡು ಬಂದಿದ್ದಾರೆ. ಮೂರು ವರ್ಷಗಳ ಕಾಲ ಒಂದು ದಿನವೂ ಊಟ ನಿದ್ದೆ ಮಾಡದೇ ಪಕ್ಷ ಕಟ್ಟಿದ್ದೇನೆ. ಜನ ಆಶೀರ್ವಾದ ಮಾಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇವೆ.
ಡಿ.ಕೆ.ಶಿವಕುಮಾರ್, ಡಿಸಿಎಂ ಫಲಿತಾಂಶದಿಂದ ಕುಮಾರಸ್ವಾಮಿ ಹತಾಶೆಗೊಂಡಿದ್ದಾರೆ. ಸರಕಾರಕ್ಕೆ ಯಾವುದೇ ಆತಂಕವಿಲ್ಲ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರುವುದನ್ನು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ