Advertisement
ಮಾ. 1ರಿಂದ 60 ವರ್ಷ ದಾಟಿದ ಹಿರಿಯರು ಮತ್ತು ಇತರ ರೋಗಗಳಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್‌ಗೆ 250 ರೂ. ನೀಡಿ ಪಡೆಯಬೇಕಿದೆ. ಈ ದರ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಫಲಾನುಭವಿಗಳು ಕೋವಿನ್ 2.0 ಡೌನ್‌ಲೋಡ್ ಮಾಡಿಕೊಳ್ಳಬೇಕು. 45 ಮತ್ತು 60 ವರ್ಷ ದಾಟಿದವರು ವೈದ್ಯರಿಂದ ಪ್ರಮಾಣ ಪತ್ರ ಪಡೆದು ಕೋವಿನ್ 2.0ನಲ್ಲಿ ಅಪ್‌ಲೋಡ್ ಮಾಡಬೇಕು. ಇದಕ್ಕೆ ಸಹಿ ಮಾಡಿ ಲಸಿಕೆ ಕೇಂದ್ರಕ್ಕೆ ತರಬೇಕು. ಆರೋಗ್ಯ ಸೇತುವಿನಲ್ಲೂ ನೋಂದಣಿ ಮಾಡಿಕೊಳ್ಳಬಹುದು. ಬಳಿಕ ಈ ಆ್ಯಪ್ ಹತ್ತಿರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ತೋರಿಸುತ್ತದೆ. ಇದನ್ನು ಆರಿಸಿಕೊಂಡು ಲಸಿಕೆ ಪಡೆಯಲು ಹೋಗಬಹುದು. 268 ಆರೋಗ್ಯ ಕೇಂದ್ರ
ರಾಜ್ಯದಲ್ಲಿ ಸಾರ್ವಜನಿಕರಿಗೆ ಕೊರೊನಾ ಲಸಿಕೆ ವಿತರಣೆಗೆ ಆರೋಗ್ಯ ಇಲಾಖೆ ಸಜ್ಜಾಗಿದ್ದು, 268 ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಎಲ್ಲ ತಾಲೂಕು, ಜಿಲ್ಲಾಸ್ಪತ್ರೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ -ಸೋಮವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಎಲ್ಲ ದಿನವೂ ಲಭ್ಯ.
Related Articles
2ನೇ ಹಂತದಲ್ಲಿ 10 ಕೋಟಿ ಮಂದಿಗೆ ಲಸಿಕೆ ನೀಡಬೇಕಾಗಿದೆ. ಹೀಗಾಗಿ ಎಲ್ಲ ರೀತಿಯ ಸರಕಾರಿ ಆಸ್ಪತ್ರೆಗಳನ್ನು ಬಳಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ.
Advertisement