Advertisement

ಕುಡಿಯುವ ನೀರಿಗಾಗಿ 2,500 ಕೋಟಿ ರೂ. ಯೋಜನೆ: ಬೈರತಿ ಬಸವರಾಜ್‌

09:23 PM Apr 28, 2022 | Team Udayavani |

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ ಸಹಿತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ತಪ್ಪಿಸಲು 2,500 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ  ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಗಮನಿಸಿ ಈ ಯೋಜನೆ  ರೂಪಿಸಲಾಗಿದೆ. ಅಮೃತ್‌ ಮತ್ತು ಜಲಜೀವನ್‌ ಮಿಷನ್‌ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಕುರಿತಾದ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ನೀಡಿದ್ದು, ಅವರು ಪೂರಕವಾಗಿ ಪ್ರತಿಕ್ರಿಯಿಸಿದ್ದಾರೆ. ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕ ಬಳಿಕ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next