Advertisement

ಅಪಘಾತದ ಸಂತ್ರಸ್ತರಿಗೆ ನೆರವಾದರೆ 25,000ರೂ. ಬಹುಮಾನ: ಗಡ್ಕರಿ

12:40 AM Jan 14, 2025 | Team Udayavani |

ಹೊಸದಿಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವ ಪರೋಪಕಾರಿಗಳಿಗೆ 25,000ರೂ. ಬಹುಮಾನ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ. ನಾಗಪುರದಲ್ಲಿ ರಸ್ತೆ ಸುರಕ್ಷ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಪಘಾತವಾದಾಗ ಮೊದಲ 1 ಗಂಟೆ ನಿರ್ಣಾಯಕವಾಗಿದ್ದು, ಆ ಅವಧಿಯಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಈಗ ನೀಡುತ್ತಿರುವ 5 ಸಾವಿರ ರೂ. ಬಹುಮಾನ ಸಾಲುತ್ತಿಲ್ಲ. ಹೀಗಾಗಿ ಇವರಿಗೆ 25 ಸಾವಿರ ರೂ. ನೀಡಲಾಗುವುದು ಎಂದರು. ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ 7 ದಿನಗಳವ­ರೆಗೆ 1.5 ಲಕ್ಷ ರೂ.ವರೆಗಿನ ಆಸ್ಪತ್ರೆ ವೆಚ್ಚವನ್ನು ಸಹ ಕೇಂದ್ರ ಸರಕಾರ ಭರಿಸಲಿದೆ. ಇದು ರಾಜ್ಯ ಹೆದ್ದಾರಿ­ಗಳಲ್ಲಿ ಗಾಯಗೊಂಡರೂ ಅನ್ವಯಿಸುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.