Advertisement

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 255.88 ಕೋಟಿ ರೂ.

05:43 PM Apr 03, 2022 | Team Udayavani |

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 255.88 ಕೋಟಿ ಭರ್ಜರಿ ಕೊಡುಗೆ ನೀಡಿದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಸಂಸದ ಸಂಗಣ್ಣ ಕರಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಪರಿಕಲ್ಪನೆಯಂತೆ ಈಗಿರುವ ಬೀದರ-(ಜೇವರ್ಗಿ) ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150 (ಎ) ಅನ್ನು ಜೇವರ್ಗಿಯಿಂದ ಮಸ್ಕಿವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದು ಹಿಂದುಳಿದ ಭಾಗಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ ಎಂದಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ರಾಜಕಾರಣದ ಪರಿಕಲ್ಪನೆಯಂತೆ ಹೆದ್ದಾರಿಗಳು ದೇಶದ ಜನರ ಜೀವನಾಡಿಯಾಗಿವೆ. ಈಗಿರುವ ದ್ವಿಪಥ ರಸ್ತೆಯನ್ನು ಲಿಂಗಸುಗೂರು ತಾಲೂಕಿನ ಮೂಡಬಾಳ ಕ್ರಾಸ್‌ನಿಂದ ಸಿಂಧನೂರು, ಸಿರಗುಪ್ಪ ಮೂಲಕ ಬಳ್ಳಾರಿವರೆಗೆ ಚತುಷ್ಪಥ ರಸ್ತೆ ವಿಸ್ತರಣೆಗೆ 255.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈಗಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಟ್ಟಣೆ ಮತ್ತು ಮಳೆಗಾಲದಲ್ಲಿ ಮುಳುಗುವುದರಿಂದ ಬೆಂಗಳೂರಿಗೆ ತೆರಳಲು ಪರ್ಯಾಯ ಮಾರ್ಗದ ರಸ್ತೆ ಇದಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ನಾವು ಪ್ರಸ್ತಾವ ಸಲ್ಲಿಸಿದ್ದೆವು. ನಮ್ಮ ಮನವಿಗೆ ಸ್ಪಂದಿಸಿದ ಸರ್ಕಾರ ಅನುಮೋದನೆ ನೀಡಿರುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿಂಧನೂರು, ಮಸ್ಕಿ, ಸಿರಗುಪ್ಪ ಕ್ಷೇತ್ರಗಳ ಅಭಿವೃದ್ಧಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ಜೇವರ್ಗಿ, ಮುದಗಲ್‌, ಲಿಂಗಸುಗೂರು, ಸಿಂಧನೂರು, ಮಸ್ಕಿ, ಸಿರಗುಪ್ಪ, ಬಳ್ಳಾರಿ ಮೂಲಕ ರಾಜಧಾನಿ ತಲುಪಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸರ್ವೋತೋಮುಖ ಅಭಿವೃದ್ಧಿಗೆ ಬದ್ಧವಾಗಿರುವ ಕೇಂದ್ರ ಸರ್ಕಾರ ರೈಲ್ವೆ, ಹೆದ್ದಾರಿ, ಗ್ರಾಮೀಣ ರಸ್ತೆ, ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುವ ಮೂಲಕ ಹೊಸ ಶಕೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next