Advertisement
ಚಿಕ್ಕಮಗಳೂರು ನಗರದ ರೈಲ್ವೇ ನಿಲ್ದಾಣ ಹಾಗೂ ಹಾದಿಹಳ್ಳಿ ರೈಲು ನಿಲ್ದಾಣ ಪರಿಶೀಲಿಸಿ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರ ಸರ್ಕಾರ ರಾಜ್ಯದ 59 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, 54 ನಿಲ್ದಾಣಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಚಿಕ್ಕಮಗಳೂರು ರೈಲು ನಿಲ್ದಾಣವೂ ಒಂದಾಗಿದೆ. 26 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.
Related Articles
Advertisement
ಚಿಕ್ಕಮಗಳೂರು ರೈಲ್ವೇ ನಿಲ್ದಾಣ ಕಾಮಗಾರಿ ಡಿಸೆಂಬರ್ 25 ರೊಳಗೆ ಕಾಮಗಾರಿ ಮುಕ್ತಾಯ ಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು ಅಲ್ಲಿಂದ ಅರೇಹಳ್ಳಿ, ಹಾಸನ ರೈಲ್ವೇ ಮಾರ್ಗಕ್ಕೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಜಾಗ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಹಾಸನ ಜಿಲ್ಲೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವೇ ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದರು.
ಜನಸಾಮಾನ್ಯರಿಗೆ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ರೈಲ್ವೇ ಸೇವೆಯನ್ನು ತಾಲೂಕು ಕೇಂದ್ರಗಳಿಗೂ ವಿಸ್ತರಿಸುವ ನಿಟ್ಟಿನಲ್ಲಿ ಕಾರ್ಯೋನುಕರಾಗಿದ್ದೇವೆ ಎಂದ ಅವರು, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಇಲ್ಲಿ ರೈಲ್ವೇ ನಿಲ್ದಾಣಕ್ಕೆ ಜಾಗ ನೀಡಿದ ರೈತರಿಗೆ ಓಡಾಡಲು ರಸ್ತೆ ಇಲ್ಲ ತೊಂದರೆಯಾಗಿದೆ ಎಂಬ ಸಮಸ್ಯೆಯನ್ನು ಗಮನಕ್ಕೆ ತಂದಿದ್ದು, ಸಮಸ್ಯೆ ನಿವಾರಣೆಗೆ ಮುಂದಾಗುವುದಾಗಿ ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳ, ಕೊಲ್ಲೂರು ರೈಲ್ವೇ ಸಂಪರ್ಕ ಕಲ್ಪಿಸುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಮಾಡಿದ್ದಾರೆ. ಎಲ್ಲೆಲ್ಲಿ ಅವಶ್ಯಕತೆ ಇದೆ. ಅನುಗುಣವಾಗಿ ರೈಲ್ವೆ ಸಂಪರ್ಕ ಕಲ್ಪಿಸಲಾಗುವುದು, ರಾಜ್ಯ ಸರ್ಕಾರ ನಮ್ಮೊಂದಿಗೆ ಕೈಜೋಡಿಸಬೇಕು ಎಂದ ಅವರು, ಜಾಗ ನೀಡಿದರೆ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದರು.
ಮೂರು ತಿಂಗಳಿಗೊಮ್ಮೆ ಲೋಕಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರ ಜತೆಯಲ್ಲಿ ಡಿಆರ್ ಎಂಗಳು ಸಲಹಾ ಸಮಿತಿ ಮಾಡಲು ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ಆದೇಶ ಮಾಡಲಾಗುವುದು ಎಂದು ತಿಳಿಸಿದರು.