Advertisement

ಆಮ್ಲಜನಕ ಕೊರತೆಯಿಂದ ಗೋವಾದಲ್ಲಿ 4 ಗಂಟೆಯಲ್ಲಿ 26 ಮಂದಿ ಸಾವು!

08:03 AM May 12, 2021 | Team Udayavani |

ಪಣಜಿ: ಆಮ್ಲಜನಕದ ಕೊರತೆಯಿಂದಾಗಿ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ 26 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಗೋವಾದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

Advertisement

ನಿನ್ನೆ ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 6 ರವರೆಗೆ 26 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ನಿರ್ವಹಣೆಯಲ್ಲಿ ಯಾವುದೇ ವೈಫಲ್ಯ ಕಂಡುಬಂದಿಲ್ಲ. ಆದರೆ, ಆಸ್ಪತ್ರೆಗೆ ಅಗತ್ಯ ಪ್ರಮಾಣದಷ್ಟು ಆಮ್ಲಜನಕ ಪೂರೈಕೆಯಾಗಿಲ್ಲ ಎಂದು ಆರೋಗ್ಯ ಸಚಿವ ವಿಶ್ವಜಿತ್‌ ರಾಣೆ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಕೂಡಲೇ ಬಾಂಬೆ ಹೈಕೋರ್ಟ್‌ನ ಪಣಜಿ ಪೀಠ ತನಿಖೆ ನಡೆಸಬೇಕು.  ಜಿಎಂಸಿಎಚ್‌ ನಲ್ಲಿ ಕೋವಿಡ್‌ ರೋಗಿಗಳಿಗೆ ನೀಡುವ ಚಿಕಿತ್ಸೆಯ ಉಸ್ತುವಾರಿಯನ್ನೂ ಪೀಠ ವಹಿಸಿಕೊಳ್ಳಬೇಕು ಎಂದು ಸಚಿವ ರಾಣೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next