Advertisement

ಡೆಂಘೀ ವಿರೋಧಿ ಜಾಗೃತಿ ಜಾಥಾ: ಜಿಲ್ಲೆಯಲ್ಲಿ 26 ಪ್ರಕರಣ ಪತ್ತೆ

01:19 PM Jul 27, 2019 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಜನೆವರಿಯಿಂದ ಇಲ್ಲಿಯವರೆಗೆ ಡೆಂಘೀ ರೋಗದ ಸಂಶಯಾಸ್ಪದ 246 ರಕ್ತ ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 26 ದೃಢಪಟ್ಟಿವೆ.

Advertisement

ಬೆಳಗಾವಿ ನಗರ, ಚಿಕ್ಕೋಡಿ ಹಾಗೂ ಅಥಣಿಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿದ್ದು ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಎಸ್‌.ಪಲ್ಲೇದ ಹೇಳಿದರು

ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ವಂಟಮುರಿ ಕಾಲನಿಯಲ್ಲಿ ಡೆಂಘೀ ವಿರೋಧಿ

ಮಾಸಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ವರ್ಷಕ್ಕೆ ಹೊಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

Advertisement

ಇದಕ್ಕೂ ಮುನ್ನ ಜಾಥಾ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಾಂತ ಮುನ್ಯಾಳ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶಶಿಕಾಂತ ಮುನ್ಯಾಳ ಡೆಂಘೀ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಯಾವುದೇ ಜ್ವರ ಇದ್ದರೂ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ

ಭೇಟಿ ನೀಡಿ ಲಾರ್ವಾ ಸಮೀಕ್ಷೆ ಮಾಡಿ ಸಾರ್ವಜನಿಕರಿಗೆ ಡೆಂಘೀ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮ ಹಾಗೂ ನಿಯಂತ್ರಣ ಕುರಿತು ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರು ಸಹ ಆರೋಗ್ಯ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಜಾಥಾ ಕಾರ್ಯಕ್ರಮದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ| ಶಶಿಧರ ನಾಡಗೌಡ, ಜಿಲ್ಲಾ ಸರ್ವೕಕ್ಷಣಾಧಿಕಾರಿ ಡಾ| ಬಿ.ಎನ್‌.ತುಕ್ಕಾರ, ಡಾ| ಸಾವಿತ್ರಿ ಬೆಂಡಿಗೇರಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಅನಿಲ ಕೊರಬು, ತಾಲೂಕಾ ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ, ಕೀಟಶಾಸ್ತ್ರಜ್ಞರಾದ ಗಣಪತಿ ಬಾರ್ಕಿ, ಶಿಲ್ಪಾ ಹಳೇಮನಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next