ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 18 ದಿನಗಳಿಂದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆದರೆ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಮೇ ತಿಂಗಳಿನಲ್ಲಿ 26,000 ಸಾವಿರಕ್ಕೂ ಅಧಿಕ ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ;ಕೋವಿಡ್ : ರಾಜ್ಯದಲ್ಲಿಂದು 44473 ಜನ ಗುಣಮುಖ; 16604 ಹೊಸ ಪ್ರಕರಣ ಪತ್ತೆ
ಭಾನುವಾರ ಭಾರತದಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಮೇ ತಿಂಗಳಿನಲ್ಲಿ 1,17, 289 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಏಪ್ರಿಲ್ ನಲ್ಲಿ ಮಹಾರಾಷ್ಟ್ರದಲ್ಲಿ 68,513 ಕೋವಿಡ್ 19 ಸಾವು ಸಂಭವಿಸಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 46,02,472ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸಂಬಂಧಿತ ಸಾವಿನ ಪ್ರಮಾಣ ಏಪ್ರಿಲ್ ನಲ್ಲಿ ಶೇ.1.49ರಷ್ಟಿತ್ತು ಎಂದು ವರದಿ ತಿಳಿಸಿದೆ.
ಮೇ 30ರಂದು ಮಹಾರಾಷ್ಟ್ರದಲ್ಲಿ 94,844 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದರು, ಅಲ್ಲದೇ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ 57,31,815ಕ್ಕೆ ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.