ಕೆಂಗೇರಿ: “ಬೇಸಿಗೆಯಿಂದ ಅಂತ ರ್ಜಲ ಪ್ರಮಾಣ ತೀವ್ರ ಕುಸಿತ ಕಂಡಿದೆ. ಹೀಗಾಗಿ ಮುಂದಿನ ದಿನಗ ಳಲ್ಲಿ ನೀರಿನ ಅಭಾವವಾಗುವ ಸಾಧ್ಯತೆಗಳಿವೆ. ನಾಗರಿಕರು ನೀರನ್ನು ಮಿತವಾಗಿ ಬಳಸಿ ತೊಂದರೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು,” ಎಂದು ಶಾಸಕ ಎಸ್.ಟಿ ಸೋಮ ಶೇಖರ್ ಮನವಿ ಮಾಡಿದರು.
ಬೆಂಗಳೂರು ದಕ್ಷಿಣ ತಾಲ್ಲೂಕು ರಾಮೋಹಳ್ಳಿ ಗ್ರಾಪಂ ವ್ಯಾಪ್ತಿಯ ವಿನಾಯಕ ನಗರ, ರಾಮೋಹಳ್ಳಿ, ಗುಲಗಂಜನಹಳ್ಳಿ, ಕೃಷ್ಣಸಾಗರ ಗ್ರಾಮಗಳಲ್ಲಿ ಸುಮಾರು 2 ಕೋಟಿ 65 ಲಕ್ಷ ರೂ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
“ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ನಾಗರಿಕರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿ ತ್ತಿದೆ,” ಎಂದರು.
ಗ್ರಾಪಂ ಅಧ್ಯಕ್ಷೆ ರೂಪಾ ಮಾತನಾಡಿ, “ಪ್ರತಿ ಗ್ರಾಮಗಳಲ್ಲಿನ ಸಮಸ್ಯೆ ಗಳ ಕುರಿತು ಮಾಹಿತಿ ಪಡೆದು ಕೊಂಡು ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕಾಗಿ ಸಭೆಗಳನ್ನು ನಡೆಸಲಾಗುವುದು,” ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ತಾಲ್ಲೂಕು ಭೂ ಮಂಜೂರಾತಿ ಸಮಿತಿ ಮಾಜಿ ಸದಸ್ಯ ವಿ.ವೇಣುಗೋಪಾಲ್ ಮಾತ ನಾಡಿ, “ಹಲವಾರು ವರ್ಷಗಳಿಂದ ಅಭಿವೃದ್ಧಿ ಯಿಂದ ವಂಚಿತವಾಗಿದ್ದ ಗ್ರಾಮಗಳ ವಿಚಾರದಲ್ಲಿ ಶಾಸಕರು ವಿಶೇಷ ಆಸಕ್ತಿ ವಹಿಸಿದ್ದಾರೆ,” ಎಂದರು.