Advertisement

267 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ: ರವಿ

11:11 AM Jul 28, 2020 | Suhan S |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ಪರಿಹಾರ ಸೇರಿದಂತೆ ವಿವಿಧ ಸಂಕಷ್ಟಗಳಿಗೆ ಪರಿಹಾರ ಧನವಾಗಿ ರಾಜ್ಯ ಸರ್ಕಾರ ಜಿಲ್ಲೆಗೆ 267 ಕೋಟಿ ರೂ. ನೀಡಿದೆ ಎಂದು ಸಚಿವ ಸಿ.ಟಿ. ರವಿ ತಿಳಿಸಿದರು.

Advertisement

ಸೋಮವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ “ಸವಾಲುಗಳ ಒಂದು ವರ್ಷ ಪರಿಹಾರದ ಸ್ಪರ್ಶ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅವರು ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗ ಆವರಿಸಿ ಜನತೆ ಆರ್ಥಿಕ ಸಂಕಷ್ಟ ಎದುರಿಸುವಂತೆ ಮಾಡಿದೆ. ಈ ನಡುವೆ ರಾಜ್ಯ ಸರ್ಕಾರ ರೂ. 2,272 ಕೋಟಿ ವಿಶೇಷ ಪ್ಯಾಕೇಜ್‌ ಘೋಷಿಸಿ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದ ಎಲ್ಲಾ ವರ್ಗದ ಬಡ ಜನರ ಕಷ್ಟಗಳಿಗೆ ಸ್ಪಂದಿಸಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಅತಿವೃಷ್ಟಿ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಅತಿವೃಷ್ಟಿ ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6,108 ಕೋಟಿ ರೂ. ಪರಿಹಾರಧನ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟ ಹಾಗೂ ಸವಾಲುಗಳ ವರ್ಷವಾಗಿದ್ದು, ಇದರ ನಡುವೆಯೂ ಸರ್ಕಾರ ಅಭಿವೃದ್ದಿಗೆ ಮುಂದಾಗಿದೆ ಎಂದರು.

ಲಾಕ್‌ಡೌನ್‌ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪ್ರತಿವರ್ಗಕ್ಕೂ ಸಹಾಯಧನ ನೀಡುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿದೆ. ಜಿಲ್ಲೆಯಲ್ಲಿ ಒಟ್ಟು 952 ಕ್ಷೌರಿಕರಿಗೆ, 481 ಅಗಸರಿಗೆ, 3,896 ಜನ ಆಟೋ, ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡಲಾಗಿದೆ. ಹಾಗೂ 38,220 ಕಟ್ಟಡ ಕಾರ್ಮಿಕರಿಗೆ 19 ಕೋಟಿ 11ಲಕ್ಷ ರೂ. ಮತ್ತು ಪಿ.ಎಂ. ಕಿಸಾನ್‌ ಯೋಜನೆಯಡಿ 1,11,650 ಫಲಾನುಭವಿಗಳಿಗೆ ಏಪ್ರಿಲ್‌ ತಿಂಗಳಲ್ಲಿ ಕೇಂದ್ರದಿಂದ 2 ಸಾವಿರ ಮತ್ತು ರಾಜ್ಯ ಸರ್ಕಾರದಿಂದ 2ಸಾವಿರ ರೂ. ಸಹಾಯಧನ ಬಿಡುಗಡೆಗೊಳಿಸಲಾಗಿದೆ ಎಂದರು.

ಎಂ.ಎಸ್‌.ಎಂ.ಇ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕಾಗಿ ರೂ.56 ಕೋಟಿ ಬಿಡುಗಡೆಯಾಗಿದ್ದು, 3,834 ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ರೈತರ ಹಿತಕಾಯುವ ಉದ್ದೇಶದಿಂದ ಎ.ಪಿ.ಎಂ.ಸಿ. ಕಾಯ್ದೆಗೆ ತಿದ್ದುಪಡಿ ರೂಪಿಸಲಾಗಿದೆ. ನನ್ನ ಬೆಳೆ ನನ್ನಹಕ್ಕು ಎನ್ನುವಂತೆ ರೈತರು ತಮ್ಮ ಬೆಳೆಯನ್ನು ಸೂಕ್ತ ಬೆಂಬಲ ಬೆಲೆ ಸಿಗುವ ಯಾವುದೇ ಮಾರುಕಟ್ಟೆಯಲ್ಲಾದರೂ ಮಾರಾಟ ಮಾಡಬಹುದಾಗಿದೆ. ಇದರಿಂದಾಗಿ ಮಧ್ಯವರ್ತಿಗಳ ಸಮಸ್ಯೆಯಿಲ್ಲದೇ ರೈತರೇ ನೇರ ಲಾಭ ಪಡೆಯಬಹುದು. ಇದರಿಂದಾಗಿ ರೈತರು ಅನುಭವಿಸುತ್ತಿದ್ದ ಸಮಸ್ಯೆಗಳು ನಿವಾರಣೆಯಾಗಲಿವೆ. ಭೂ ಸುಧಾರಣೆ ಕಾಯ್ದೆಯಿಂದ ರಾಜ್ಯದಲ್ಲಿ ಹೊಸದಾಗಿ ಆರಂಭಿಸುವ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದ್ದು, ಕೃಷಿ ಕೈಗೊಳ್ಳುವವರಿಗೂ ಅನುಕೂಲವಾಗಲಿದೆ. ಇದರಿ ಂದಾಗಿ ಸಾಕಷ್ಟು ಜನರಿಗೆ ಉದ್ಯೋಗ ದೊರೆತು ನಿರುದ್ಯೋಗ ಸಮಸ್ಯೆ ನಿವಾರಣೆ ಯಾಗಲಿದೆ. ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆ ಹಾಗೂ

Advertisement

ಸ್ವಯಂ ಉದ್ಯೋಗ ಕೈಗೊಳ್ಳಲು ಹೆಚ್ಚು ಪ್ರೋತ್ಸಾಹ ನೀಡಿದಂತಾಗಲಿದೆ. ಒಂದು ವರ್ಷದ ಅವಧಿಯಲ್ಲಿ ಹೊಸ ಅಭಿವೃದ್ಧಿಯ ಪರ್ವದಲ್ಲಿ ಸಾಧನೆಯ ಲಾಂಗ್‌ಜಂಪ್‌ ಮಾಡದೇ ಇದ್ದರೂ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next