ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ಬಂದಿರುವ ವಾಹನಗಳ ಮೇಲೆ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆ, ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತರಾಗಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸದ್ಯ ನಗರದಲ್ಲಿ ಮುಚ್ಚಿದ ಕೆಂಡದಂಥ ಪರಿಸ್ಥಿತಿಯಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ನಗರದಾದ್ಯಂತ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ:ಬೆಳಗಾವಿಯಲ್ಲಿ ಉದ್ವಿಗ್ನಗೊಂಡ ಪರಿಸ್ಥಿತಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ
ಯಾದಗಿರಿ ಸಿಪಿಐ ಜೀಪ್ ಸೇರಿದಂತೆ ನಾಲ್ಕು ಪೊಲೀಸ್ ವಾಹನಗಳು, ನಾಲ್ಕು ಸರ್ಕಾರಿ ಕಾರುಗಳು ಹಾಗೂ ಸಿನಿಮಾ ನೋಡಲು ಬಂದಿದ್ದ ಮೂರು ಕಾರುಗಳು ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳ ಮೇಲೆ ಕಲ್ಲು ತೂರಲಾಗಿದೆ. ಬೆಳಗಾವಿ ನಗರದ ಸೂರ್ಯಾ ಯಾತ್ರಿ ನಿವಾಸ ಎದುರು ನಿಲ್ಲಿಸಿದ್ದ ಪೊಲೀಸ್ ಜೀಪ್ ಗೆ ಬೆಂಕಿ ಹಚ್ಚಲಾಗಿದೆ. ಇದನ್ನು ಗಮನಿಸಿದ ಸೆಕ್ಯೂರಿಟಿ ಗಾರ್ಡ್ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:ಶಿವಾಜಿ ಪ್ರತಿಮೆಗೆ ಕಪ್ಪುಮಸಿ : ಬೆಳಗಾವಿಯಲ್ಲಿ ರಾತ್ರೋರಾತ್ರಿ ಹಿಂದೂ ಸಂಘಟನೆಗಳ ಪ್ರತಿಭಟನೆ