Advertisement
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳವಾರ ಪ್ರವಾಹ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳ ಹಾನಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದರು.
Related Articles
Advertisement
ರಾಜ್ಯ ಸರ್ಕಾರ ಶಾಲಾ ಮಕ್ಕಳ ಕೌಶಲ್ಯ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಕೌಶಲ್ಯ ತರಬೇತಿ ನೀಡಬೇಕು ಹಾಗೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಉತ್ತಮ ಆಹಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುವುದರಿಂದ ಮತ್ತಷ್ಟು ಹಾಸ್ಟೆಲ್ಗಳನ್ನು ಪ್ರಾರಂಭಿಸಬೇಕು.ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನಗಳನ್ನು ಪಡೆದುಕೊಂಡು ಮಾಹಿತಿ ನೀಡಿದರೆ ವಿದ್ಯಾರ್ಥಿನಿಲಯ ಕಾಮಗಾರಿಗೆ ಬೇಕಾಗುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ಎಷ್ಟು ಭವನಗಳು ಕಾಮಗಾರಿ ಪ್ರಗತಿಯಲ್ಲಿವೆ ಎಂಬುದನ್ನು ಪಟ್ಟಿ ಮಾಡಿ,ಅದಕ್ಕೆ ಬೇಕಾಗಿರುವ ಅನುದಾನದ ವಿವರವನ್ನು ಮುಂದಿನ ಸಭೆಯಲ್ಲಿ ಮಾಹಿತಿ ನೀಡಿದರೆ ಭವನಗಳ ಕಾಮಗಾರಿ ಪೂರ್ಣಗೊಳಿಸಲು ಅನುದಾನ ನೀಡುವುದಾಗಿ ತಿಳಿಸಿದರು.
ನಗರ ಹಾಗೂ ಗ್ರಾಮಾಂತರ ಪ್ರದೇಶದ ಕೆಲವು ಭಾಗದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆಯಿದ್ದು, ಜಿಲ್ಲಾಡಳಿತದಿಂದ ಕೂಡಲೇ ಖರಾಬ್ ಭೂಮಿಯನ್ನು ಸ್ಮಶಾನಕ್ಕೆ ಮಂಜೂರು ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಇಲಾಖೆಗಳು ಸ್ಥಳಾಂತರವಾಗಬೇಕು ಎಂದರು.
ಅಂಬೇಡ್ಕರ್ ನಿಗಮದ ವತಿಯಿಂದ 5 ಐರಾವತ ಟ್ಯಾಕ್ಸಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.