ಲಕ್ನೋ(ಉತ್ತರಪ್ರದೇಶ): ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ಭಾರೀ ಕಾಲ್ತುಳಿತದಿಂದಾಗಿ ಮೂವರು ಮಕ್ಕಳು, ಮಹಿಳೆಯರು ಸೇರಿದಂತೆ ಒಟ್ಟು 50ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿರುವ ಘಟನೆ ಉತ್ತರಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ (ಜುಲೈ 02) ನಡೆದಿರುವುದಾಗಿ ಅಧಿಕಾರಿಗಲೂ ತಿಳಿಸಿದ್ದಾರೆ.
ಇದನ್ನೂ ಓದಿ:Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ
ರತಿಭಾನಪುರದಲ್ಲಿ ನಡೆದ ಭೋಲೆಬಾಬಾ ಪ್ರವಚನ ಕಾರ್ಯಕ್ರಮದ ನಂತರ ಈ ದುರ್ಘಟನೆ ಸಂಭವಿಸಿರುವುದಾಗಿ ವರದಿ ವಿವರಿಸಿದೆ. ಮುಗಿಲು ಮುಟ್ಟಿರುವ ಸಂಬಂಧಿಕರ ಆಕ್ರಂದನ ನಡುವೆ ಶವಗಳನ್ನು ಸಾಗಿಸುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲು ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ನಾವು ಒಟ್ಟು 60 ಶವಗಳನ್ನು ಪಡೆದಿದ್ದು, ಇದರಲ್ಲಿ 50 ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ಸತ್ಸಂಗ ಕಾರ್ಯಕ್ರಮದಲ್ಿ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಬಳಿ ಇಲ್ಲ ಎಂದು ಇಟಾ ಮುಖ್ಯ ಆರೋಗ್ಯಾಧಿಕಾರಿ ಡಾ.ಉಮೇಶ್ ಕುಮಾರ್ ತ್ರಿಪಾಠಿ ತಿಳಿಸಿದ್ದಾರೆ.