ಬಾರ್ಮರ್: 27 ವರ್ಷದ ವಿವಾಹಿತ ಮಹಿಳೆಯೊಬ್ಬರಿಗೆ ವಾಮಾಚಾರದ ಮೂಲಕ ಕೆಲಸ ಕೊಡಿಸುವ ನೆಪದಲ್ಲಿ ತಾಂತ್ರಿಕ್ ಒಬ್ಬ ನಿರಂತರ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಆರೋಪಿಯು ಕಳೆದ ಒಂದು ವರ್ಷದಿಂದ ತನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದು, ಅಶ್ಲೀಲ ವೀಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಎಂದು ಗುಡಮಲನಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪಿ ಚಂಪಾಲಾಲ್ (40) ವಾಮಾಚಾರದ ಮೂಲಕ ತನಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ಆರಂಭದಲ್ಲಿ ಆಕೆ ನಿರಾಕರಿಸಿದರೂ ನಂತರ ಆತನ ಬಲೆಗೆ ಬಿದ್ದಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಂತರ ಚಂಪಾಲಾಲ್ ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೆಲವು ಅಶ್ಲೀಲ ವೀಡಿಯೋಗಳನ್ನು ರೆಕಾರ್ಡ್ ಮಾಡಿ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.