ಚಿತ್ರದುರ್ಗ: ಜಲಜೀವನ್ ಮಿಷನ್ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಹೊಳಲ್ಕೆರೆ ತಾಲೂಕಿನ 300ಕ್ಕೂ ಹೆಚ್ಚು ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ಯೋಜನೆಗಾಗಿ ರೂ.276 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ ಎಂದು ಹೊಳಲ್ಕೆರೆ ಶಾಸಕ ಹಾಗೂ ಕೆಎಸ್ ಆರ್ ಟಿಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಳಲ್ಕೆರೆ ತಾಲೂಕಿನ 300ಕ್ಕೂ ಹೆಚ್ಚು ಗ್ರಾಮೀಣ ಜನ ವಸತಿ ಪ್ರದೇಶಗಳು ಸೇರಿದಂತೆ ಹೊಳಲ್ಕೆರೆ ಪಟ್ಟಣದಮನೆ-ಮನೆಗಳಿಗೂ ನಳ ಸಂಪರ್ಕ ಕಲ್ಪಿಸಿ, ಸಮರ್ಪಕ ಕುಡಿಯುವ ನೀರು ಕಲ್ಪಿಸುವ ಯೋಜನೆ ಇದಾಗಿದೆ ಎಂದು ಹೇಳಿದರು.
ಹೊಳಲ್ಕೆರೆ ಕ್ಷೇತ್ರಕ್ಕೆ ಇಂತಹ ದೊಡ್ಡಮಟ್ಟದ ಯೋಜನೆ ಇದುವರೆಗೂ ಯಾವುದು ಬಂದಿರಲಿಲ್ಲ. ಹೊಳಲ್ಕೆರೆ ತಾಲೂಕು ಮಲೆನಾಡು ಭಾಗದ ವ್ಯಾಪ್ತಿಗೆ ಸೇರಿದ್ದರೂಕುಡಿಯುವ ನೀರಿನ ಅಭಾವ ಬಹುತೇಕ ಗ್ರಾಮಗಳಲ್ಲಿದೆ. ಅಂತರ್ಜಲವೂ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಹೊಳಲ್ಕೆರೆ ತಾಲೂಕಿನನಲ್ಲಿ ಅಡಿಕೆ ತೋಟಗಳು ಹೆಚ್ಚಾಗಿವೆ. ಜನರಿಗೆ ಕುಡಿಯವ ನೀರಿನ ಸಮಸ್ಯೆಯ ಜತೆಗೆ ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹಾಗಾಗಿ ಕ್ಷೇತ್ರದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಗಮನಿಸಿ ಈ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಒಂದು ವರ್ಷ ಮೂರು ತಿಂಗಳಿಂದ ವಾಣಿವಿಲಾಸ ಸಾಗರದಿಂದ ನೀರು ತರಲು ನೀರಾವರಿ ಇಲಾಖೆಯಿಂದ 0.536 ಟಿಎಂಸಿ ನೀರು ಪಡೆಯಲಾಗಿದೆ. 11 ಇಲಾಖೆಗಳಿಂದ ಅನುಮತಿ ಪಡೆದು ಕಳೆದ ಒಂದು ವರ್ಷದಿಂದ ಎಲ್ಲಾ ಇಲಾಖೆಗಳ ಅನುಮತಿ ಪಡೆದು ಸರ್ಕಾರ ಯೋಜನೆ ಮಂಜೂರು ಮಾಡಿದೆ ಎಂದರು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ, ನಬಾರ್ಡ್ ನಿಂದ ಅನುದಾನ ಪಡೆದು ಈ ಯೋಜನೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಯು ಕ್ಷೇತ್ರಕ್ಕೆ ಮಹತ್ವಪೂರ್ಣ ಯೋಜನೆಯಾಗಿದ್ದು, ಈ ಯೋಜನೆ ಪೂರ್ಣಗೊಳಿಸಲು 24 ತಿಂಗಳು ಅವಧಿನಿಗದಿಪಡಿಸಲಾಗಿದ್ದು, ಯಾವುದೇ ಅನುದಾನದ ಕೊರತೆ ಉಂಟಾಗುವುದಿಲ್ಲ ಎಂದರು.
ಈ ಯೋಜನೆಯಿಂದ 2051 ರವರೆಗೆ ಹೊಳಲ್ಕೆರೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. 2022 ಆಗÓr… 15 ರೊಳಗೆ ಈ ಯೋಜನೆಯಡಿ ಕ್ಷೇತ್ರದ ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.