ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆಯುಂಟಾದ ಪರಿಣಾಮ ಕನಿಷ್ಠ 28 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್‌ನ ಭರೂಚ್ ಜಿಲ್ಲೆಯ ಸರೋದ್ ಗ್ರಾಮದ ಪಿಐ ಇಂಡಸ್ಟ್ರೀಸ್‌ನಲ್ಲಿನ ಟ್ಯಾಂಕ್‌ನಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಸೋರಿಕೆಯಾದ ಬ್ರೋಮಿನ್ ಅನಿಲವನ್ನು ಉಸಿರಾಡಿದ ಜನರು ಉಸಿರಾಟದ ತೊಂದರೆಗೆ ಒಳಗಾಗಿದ್ದಾರೆ ಎಂದು ಭರೂಚ್ ಜಿಲ್ಲಾಧಿಕಾರಿ ಎನ್‌ಆರ್ ಧಾಂಧಲ್ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅನಿಲ ಸೋರಿಕೆಯಾದ ವರದಿಯಾದಾಗ ಕಾರ್ಖಾನೆಯಲ್ಲಿ ಸುಮಾರು 2,000 ಕಾರ್ಮಿಕರು ಇದ್ದರು. ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವೇದಾಚ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ವೈಶಾಲಿ ಅಹಿರ್ ತಿಳಿಸಿದ್ದಾರೆ.
ಸದ್ಯ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯನ್ನು ತಡೆಯಲಾಗಿದ್ದು ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ತಹಬದಿಗೆ ತಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Ramanagara: ಪ್ರತಿಭಾ ಕಾರಂಜಿ ತಾಲೀಮು ವೇಳೆ ಪೆಟ್ರೋಲ್ ಬಿದ್ದು ವಿದ್ಯಾರ್ಥಿಗೆ ಸುಟ್ಟ ಗಾಯ