Advertisement
ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರಗಿದ ಅನುಸೂಚಿತ ಜಾತಿ- ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಹಾಗೂ ಎಷ್ಟು ಬಾಕಿ ಇದೆ ಎನುವುದನ್ನು ಸಭೆಯಲ್ಲಿ ಪರಿಶೀಲಿಸಲಾಗಿದೆ. ಕೆಲವು ಯೋಜನೆಗಳಿಗೆ ಮಾತ್ರ ಬದಲಾವಣೆ ಮಾಡಿ ಉಳಿದುದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
Related Articles
Advertisement
2022- 23 ನೇ ಸಾಲಿನ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕ್ರಿಯಾ ಯೋಜ ನೆಗೆ ಅನುಮೋದನೆ ನೀಡಲಾಯಿತು. ಸಚಿವರಾದ ಮಾಧುಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
ಮೂರು ತಿಂಗಳಲ್ಲಿ ಅನುದಾನ ಬಳಕೆಗೆ ಸೂಚನೆಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅಗಸ್ಟ್ ತಿಂಗಳ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ. ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಶಾಸನಬದ್ಧ ಅನುದಾನ ಆ ಸಮುದಾಯಗಳಿಗೆ ಮಾತ್ರ ಬಳಕೆಯಾಗ ಬೇಕು ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಪ್ರಮುಖ ಸೂಚನೆಗಳು
– ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡಲು ಹೆಚ್ಚಿನ ಆದ್ಯತೆ ನೀಡುವುದು.
– ಫೆಲೋಶಿಪ್ / ಲಾಪ್ ಟಾಪ್ ವಿತರಣೆಗೆ ಆದ್ಯತೆ.
– ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಳಡಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅತಿ ಹೆಚ್ಚಿನ ಆದ್ಯತೆ ನೀಡುವುದು.
ಇಂದಿನ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳಿಗೆ ಆದೇಶ ಹೊರಡಿಸಿ ಆಗಸ್ಟ್ 15ರೊಳಗೆ ಎಲ್ಲ ವೈಯಕ್ತಿಕ ಯೋಜನೆಗಳಿಗೆ ಚಾಲನೆ ನೀಡುವುದು.