ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಸಂಪೂರ್ಣ ನಿಷೇಧದ ನಡುವೆಯೂ ಭಾರಿ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಲಾಗಿದ್ದು,ಈ ಸಂಬಂಧ ಕಾನೂನು ಕ್ರಮ ಕೈಗೊಂಡಿರುವ ಪೊಲೀಸರು 281 ಜನರನ್ನು ಬಂಧಿಸಿದ್ದಾರೆ.
ಶುಕ್ರವಾರ ಪೊಲೀಸರು ಒದಗಿಸಿದ ಮಾಹಿತಿಯ ಪ್ರಕಾರ,138 ಜನರನ್ನು ಪಟಾಕಿಗಳನ್ನು ಮಾರಾಟ ಮತ್ತು ಸರಬರಾಜು ಮಾಡಿದ್ದಕ್ಕಾಗಿ ಮತ್ತು 143 ಜನರನ್ನು ಸಿಡಿಸಿದ್ದಕ್ಕಾಗಿ ಬಂಧಿಸಲಾಗಿದೆ.
ಸೆಪ್ಟೆಂಬರ್ 29 ರಿಂದ ಗುರುವಾರ ದೀಪಾವಳಿಯ ನಡುವೆ ಪಟಾಕಿ ಸಿಡಿಸಿದವರ ವಿರುದ್ಧ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಒಟ್ಟು 19,702.489 ಕೆಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಬ್ಬದ ಸೀಸನ್‌ಗೆ ಮುಂಚಿತವಾಗಿ, ದೆಹಲಿ ಸರ್ಕಾರವು ಜನವರಿ 1, 2022 ರವರೆಗೆ ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿತ್ತು.
ಮಕ್ಕಳಲ್ಲಿ ಪಟಾಕಿ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ 699 ಶಾಲೆಗಳನ್ನು ಸಂಪರ್ಕಿಸಿದ್ದರು.