Advertisement

Karnataka: ವಿಕಲಚೇತನರ ಶ್ರೇಯೋಭಿವೃದ್ಧಿಗೆ 284 ಕೋ. ರೂ. ಅನುದಾನ

12:23 AM Dec 04, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ 2011ರ ಜನ ಗಣತಿ ಪ್ರಕಾರ 13.24 ಲಕ್ಷ ಮಂದಿ ವಿಕಲಚೇತನರಿದ್ದು ಅವರ ಶ್ರೇಯೋಭಿವೃದ್ಧಿಗೆ ರಾಜ್ಯ ಸರಕಾರ 284 ಕೋಟಿ ರೂ.ಅನುದಾನ ತೆಗೆದಿರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಮಹಿಳೆಯರ ಮತ್ತು ಮಕ್ಕಳ ಅಭಿ ವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ – 2023ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ವರ್ಷ ಏಳು ಜಿಲ್ಲೆಗಳಲ್ಲಿ ಹತ್ತು ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಕಲಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 258.27 ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ವಿಕಲಚೇತನರಿಗೆ ಶೇ. 5ರ ಮೀಸಲಾತಿಯನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮಕ್ಕೆ ಬಹಳಷ್ಟು ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿ ದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ವಿಕಲಚೇತನರಿಗೆ ಪ್ರಸಕ್ತ ಸಾಲಿನಲ್ಲಿ 4 ಸಾವಿರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನವಚೇತನ ಕಿರು ಹೊತ್ತಿಗೆ ಯೋಜನೆಗಳ ಕರಪತ್ರ, ಕಿರುಚಿತ್ರ, 2024ರ ಸಾಲಿನ ಬ್ರೈಲ್‌ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನ ಸಂಸ್ಥೆಗಳಿಗೆ ಹಾಗೂ ವಿಶೇಷ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ| ಜಿ.ಸಿ. ಪ್ರಕಾಶ್‌, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕ ಎ.ಎನ್‌. ಸಿದ್ದೇಶ್ವರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್‌ ಸೂರ್ಯವಂಶಿ, ಕರ್ನಾಟಕ ಬೌದ್ಧಿಕ ವಿಕಲಚೇತನ ಮಕ್ಕಳ ಪಾಲಕರ ಸಂಸ್ಥೆಯ ಮಾಜಿ ಅಧ್ಯಕ್ಷ ಗಡ್ಕರಿ ಜೆ.ಪಿ. ಮುಂತಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next