Advertisement

Karnataka Budget ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ

11:08 PM Feb 16, 2024 | Team Udayavani |

ಮುಂಗಡ ಪತ್ರದಲ್ಲಿ ಮಹಿಳಾ ಅಭಿವೃದ್ಧಿ ಯೋಜನೆಗಳಿಗಾಗಿ 86,423 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರಲ್ಲಿ 28, 608 ಕೋಟಿ ರೂ.ಗಳನ್ನು “ಗೃಹಲಕ್ಷ್ಮಿ’ ಯೋಜನೆ ಪಡೆದುಕೊಂಡಿದೆ.

Advertisement

ಪ್ರತಿ ಮನೆಯ ಯಜಮಾನಿಯು ಕುಟುಂಬ ನಿರ್ವಹಣೆ ಜತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಉದ್ದೇಶವನ್ನು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುತ್ತಿರುವ ಗೃಹಲಕ್ಷ್ಮಿಯೋಜನೆಗೆ 2024-25ನೇ ಸಾಲಿನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಡುವ ಮೂಲಕ ಯೋಜನೆ ಮುಂದುವರಿಕೆಯ ಗ್ಯಾರಂಟಿ ನೀಡಿದ್ದಾರೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಈ ಯೋಜನೆಯಡಿ ನೋಂದಾಯಿ ಸಿಕೊಂಡಿದ್ದಾರೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂ.ಗಳಂತೆ, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು.

ಮುಟ್ಟಿನ ಕಪ್‌ ಬಳಕೆಗೆ ಪ್ರೋತ್ಸಾಹ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ “ಪ್ರೇರಣಾ’ ಕಾರ್ಯಕ್ರಮದಡಿ ಸ್ವಸಹಾಯ ಗುಂಪುಗಳ ಮಹಿಳೆಯರು, ಗ್ರಾಮ ಪಂಚಾಯಿತಿಗಳ ಮಹಿಳಾ ಸದಸ್ಯರು ಹಾಗೂ ಗ್ರಾಮೀಣ ಪ್ರದೇಶದ ಮುಂಚೂಣಿಯ ಕಾರ್ಯ ಕರ್ತೆಯರಿಗೆ ಮುಟ್ಟಿನ ಕಪ್‌ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತದೆ. ಈ ಮೂಲಕ ಗ್ರಾಮದ ಇತರೆ ಮಹಿಳೆಯರು ಮುಟ್ಟಿನ ಕಪ್‌ ಬಳಕೆ ಮಾಡಲು ಪ್ರೇರೇಪಿಸಲಾಗುತ್ತದೆ.

ಇದೇ ವೇಳೆ ಯಂತ್ರಚಾಲಿತ ದ್ವಿಚಕ್ರ ವಾಹನಗಳ ಫ‌ಲಾನುಭವಿಗಳಲ್ಲಿ ಬಾಕಿ ಇರುವ 1,500 ವಿಶೇಷ ಚೇತನರಿಗೆ ವಿತರಿಸಲು ಬಜೆಟ್‌ನಲ್ಲಿ ತಿಳಿಸಲಾಗಿದೆ.

500 ಒಬಿಸಿ ವಿದ್ಯಾರ್ಥಿಗಳಿಗೆ ಉಚಿತ ನೀಟ್‌ ತರಬೇತಿ
ಸಿಎ ಫೌಂಡೇಷನ್‌ ಪರೀಕ್ಷೆಗೆ ತರಬೇತಿ ನೀಡಲು ಕ್ರಮ
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ವಿವಿಧ ನಿಗಮಗಳ ಮೂಲಕ 1600 ಕೋಟಿ ರೂ. ಮೀಸಲಿಟ್ಟಿರುವ ರಾಜ್ಯ ಸರಕಾರ, 100 ಸಂಖ್ಯಾಬಲದ 75 ಬಾಲಕ ಹಾಗೂ 75 ಬಾಲಕಿಯರ ಮೆಟ್ರಿಕ್‌ ನಂತರದ ವಸತಿಶಾಲೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸಲಿದೆ.

Advertisement

ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾ ಬಲದ 150 ಮೆಟ್ರಿಕ್‌ ನಂತ ರದ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹಂತ- ಹಂತವಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ.

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿ ಸುತ್ತಿರುವ 30 ವಿದ್ಯಾರ್ಥಿನಿಲಯಗಳಿಗೆ 4 ಕೋಟಿ ರೂ. ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಇಲಾಖೆಯ ವಸತಿ ನಿಲಯಗಳನ್ನು ಅಭಿವೃದ್ಧಿಪಡಿಸಲು ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗುವುದು. ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಲ್‌ಎಟಿ, ಎಂಎಟಿ ಮತ್ತು ಚಾರ್ಟರ್ಡ್‌ ಅಕೌಂಟೆಂಟ್‌ ಫೌಂಡೇಷನ್‌ ಪರೀಕ್ಷೆಗಳಿಗೆ ಸಿದ್ಧಗೊಳಿಸಲು ಪರೀûಾಪೂರ್ವ ತರಬೇತಿ ಹಾಗೂ ದೇಶದ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು 500 ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷಗಳ ಜೆಇಇ, ನೀಟ್‌ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಮಹರ್ಷಿ ವಾಲ್ಮೀಕಿ ವಸತಿ ಶಾಲೆ: ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಬಂಪರ್‌ ಸೌಲಭ್ಯಗಳನ್ನು ಪ್ರಕಟಿಸಿರುವ ಸಿಎಂ ಸಿದ್ದರಾಮಯ್ಯ, ಆದಿವಾಸಿ ಬುಡಕಟ್ಟುಗಳ ಮಕ್ಕಳಿಗಾಗಿ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಎಂದು ಮರುನಾಮಕರಣ ಮಾಡು ವುದರ ಜತೆಗೆ ಉನ್ನತೀಕರಿಸಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next