Advertisement

ಬೆಂಗಳೂರಿನಲ್ಲಿಇಂದು 287 ಒಮಿಕ್ರಾನ್ ಕೇಸ್ : ಅಧಿಕಾರಿಗಳೊಂದಿಗೆ ಸಿಎಂ ಮಹತ್ವದ ಸಭೆ

06:18 PM Jan 17, 2022 | Team Udayavani |

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಸೋಮವಾರ 287 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 766 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement

ಕೋವಿಡ್ ನಿರ್ವಹಣೆ ಮತ್ತು ಕೈಗೊಳ್ಳಲಾಗಿರುವ ಪೂರ್ವ ಸಿದ್ಧತೆಗಳ ಕುರಿತಂತೆ ತಜ್ಞರು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವರ್ಚುವಲ್ ಮೂಲಕ ಸೋಮವಾರ ಸಂಜೆ ಸಭೆ ನಡೆಸಿದರು. ಸಭೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸಿಎಂ ಜತೆ ಉಪಸ್ಥಿತರಿದ್ದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಶುಕ್ರವಾರ ಸಿಎಂ ಜತೆ ಚರ್ಚೆ ನಡೆಸಿ ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು.. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.

Advertisement

ಜನ ಟ್ರಯಾಜಿಂಗ್ ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.

ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.ಅಂತೆಯೆ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.

ಔಷಧಿ ಕಿಟ್ ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು. ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.

ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೆಕು.ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್ ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು. ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚನೆ

ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ . ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ,
ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನ.

ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದರು. ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next