Advertisement

ರಾಜ್ಯದಲ್ಲಿಂದು 295 ಕೋವಿಡ್‌ ಸೋಂಕು ಪತ್ತೆ: 5 ಸಾವು;12 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ

08:25 PM Dec 21, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 295 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. ಹನ್ನೆರುಡು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ.

Advertisement

ಬೆಂಗಳೂರು ನಗರ 204, ಉತ್ತರ ಕನ್ನಡ 30, ಮೈಸೂರು ಜಿಲ್ಲೆಯಲ್ಲಿ 10 ಪ್ರಕರಣ ದಾಖಲಾಗಿದೆ. ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದ.ಕ., ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತಮುಕೂರು, ಉಡುಪಿ ಜಿಲ್ಲೆಯಲ್ಲಿ ಬೆರೆಳಣಿಕೆ ಪ್ರಕರಣ ದಾಖಲಾಗಿದೆ.

ಶೂನ್ಯ ಪ್ರಕರಣ
ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್‌, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಕೊಡಗು 2, ಚಿಕ್ಕಬಳ್ಳಾಪುರ, ಹಾಸನ, ಕಲಬುರಗಿ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹೊಕ್ಕಳ್ಳಿ: ಮುಂದುವರೆದ ಹುಲಿ ದಾಳಿ, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಕಂಗಾಲು

ವಿದೇಶದಿಂದ 1,599 ಆಗಮನ
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.0.39 ಹಾಗೂ ಸೋಂಕಿನಿಂದ ಮೃತಪಡುವರ ಪ್ರಮಾಣ ಶೇ.1.69 ರಷ್ಟಿದೆ. ಡಿ.20ರಂದು 789 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯವನ್ನು ಪ್ರವೇಶಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು 7074 ಸಕ್ರಿಯ ಪ್ರಕರಣಗಳಿವೆ. 290ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next