ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 299 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಪತ್ತೆಯಾದ ಒಟ್ಟು ಪ್ರಕರಣದಲ್ಲಿ ಶೇ. 71ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ಪತ್ತೆಯಾಗಿದೆ.
ಮಂಗಳವಾರ ಬೆಂಗಳೂರು ನಗರದಲ್ಲಿ 215, ದ.ಕ. 14, ಕೊಡಗು 12, ಮೈಸೂರು ಜಿಲ್ಲೆ 11 ಪ್ರಕರಣ ದಾಖಲಾಗಿದ್ದು, ಉಳಿದಂತೆ ವಿಜಯಪುರ, ಮಂಡ್ಯ, ಉತ್ತರಕನ್ನಡ, ಉಡುಪಿ, ತುಮಕೂರು , ಶಿವಮೊಗ್ಗ , ಹಾಸನ, ಚಿಕ್ಕಮಗಳೂರು, ಧಾರವಾಡ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳ ವರದಿಯಾಗಿದೆ.
ಇದನ್ನೂ ಓದಿ:ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ
ಬಾಗಲಕೋಟೆ, ಬೀದರ್, ಚಾಮರಾಜ ನಗರ, ಚಿತ್ರದುರ್ಗಾ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರ 3, ದ.ಕ. ಮೈಸೂರು, ಧಾರವಾಡ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂತ ಒಟ್ಟು 7100ಸಕ್ರಿಯ ಪ್ರಕರಣಗಳಿವೆ. 260 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.