ಮೈಸೂರು: “ನಮ್ಮ ಅನ್ನದ ತಟ್ಟೆಗೆ ಕೈ ಹಾಕಬೇಡಿ. ಕೈ ಹಾಕಿದರೆ ಕೈಯನ್ನೇ ಕತ್ತರಿಸುತ್ತೇವೆ’ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ 2ಎ ಮೀಸಲಾತಿ ಹೋರಾಟಗಾರರ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ಕುರಿತ ಸಾಧಕ-ಬಾಧಕಗಳನ್ನು ಚರ್ಚಿಸುವ ಸಲುವಾಗಿ ಆಯೋಜಿಸಿದ್ದ ಹಿಂದುಳಿದ ಸಮುದಾಯಗಳ ಸಭೆಯಲ್ಲಿ ಮಾತನಾಡಿದರು.
ಬಸವ ಜಯಮೃತ್ಯುಂಜಯ ಸ್ವಾಮೀಜಿ ಒಂದು ಪೀಠದಲ್ಲಿ ಇದ್ದುಕೊಂಡು ರಾಜಕೀಯ ಪುಢಾರಿ ರೀತಿಯಲ್ಲಿ ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ಸನ್ಯಾಸಿಗಳಾಗಿ ಒಂದು ಜಾತಿಯ ಪರವಾಗಿ ಮಾತನಾಡುವುದು ಖಂಡ ನೀಯ. ನಮಗೂ ಮಾತನಾಡಲು ಬರುತ್ತದೆ. ಕಾವಿ ಬಟ್ಟೆ ಬಿಚ್ಚಿಟ್ಟು ಬನ್ನಿ. ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಿದ್ದೇವೆ, ಅದನ್ನು ಉಳಿಸಿಕೊಳ್ಳಿ ಎಂದು ಎಚ್ಚರಿಸಿದರು.
ಶಿವರಾಮು ಮೇಲೆ ದೂರು
ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ನಿಂದಿಸಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಲಿಂಗಾಯತ ಪಂಚಮಸಾಲಿ ಅಡ್ವೋಕೆಟ್ ಪರಿಷತ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಪರಿಷತ್ ಸದಸ್ಯೆ ರೇಖಾ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರಿನಲ್ಲಿ ನಡೆಯು ತ್ತಿದ್ದ ಮಾಧ್ಯಮಗೋಷ್ಠಿ ವೇಳೆ ಸ್ವಾಮೀಜಿಗೆ ಕೆ.ಎಸ್.ಶಿವರಾಮು ಎಂಬಾತ “ನಮ್ಮ ಅನ್ನದತಟ್ಟೆಗೆ ಕೈಹಾಕಿ ದರೆ ನಿಮ್ಮ ಕೈಯನ್ನು ಕತ್ತರಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕೋರಿದ್ದಾರೆ.