Advertisement

2ಜಿ ತೀರ್ಪು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಗೌರವದ ಸರ್ಟಿಫಿಕೇಟ್ ಅಲ್ಲ!

02:15 PM Dec 21, 2017 | Team Udayavani |

ನವದೆಹಲಿ: 2ಜಿ ತರಂಗಾಂತರ ಬಹುಕೋಟಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ಗುರುವಾರ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಹಾಗೂ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿರುವುದಕ್ಕೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷ ಇದನ್ನು ಸರ್ಟಿಫಿಕೇಟ್ ಎಂದು ತಿಳಿದುಕೊಳ್ಳಬಾರದು ಎಂದು ತಿರುಗೇಟು ನೀಡಿದ್ದಾರೆ.

Advertisement

2ಜಿ ಹಗರಣದ ತೀರ್ಪನ್ನು ಕಾಂಗ್ರೆಸ್ ಮುಖಂಡರು ತಮಗೆ ಸಿಕ್ಕ ಗೌರವದ ಸಂಕೇತ ಎಂಬಂತೆ ವರ್ತಿಸುತ್ತಿದ್ದಾರೆ. ಮತ್ತು ತಮ್ಮ ಪ್ರಾಮಾಣಿಕ ನೀತಿಗೆ ಸಂದ ಪ್ರಮಾಣಪತ್ರ ಎಂದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

2ಜಿ ಮೊಬೈಲ್ ತರಂಗಾಂತರಗಳನ್ನು ರಾಜಾ ಅವರು ಕಡಿಮೆ ಮೊತ್ತಕ್ಕೆ ಹಂಚಿಕೆ ಮಾಡಿದ್ದಾರೆ ಎಂಬುದನ್ನು ಸಿಬಿಐ ಆರೋಪಪಟ್ಟಿಯಲ್ಲಿ ದೂರಿತ್ತು. ಇದರಿಂದಾಗಿ ದೇಶದ ಬೊಕ್ಕಸಕ್ಕೆ ಲಕ್ಷಾಂತರ ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next