Advertisement

ದ್ವಿ. ಪಿಯು ಪರೀಕ್ಷೆಗೆ ಸಿದ್ಧತೆ

11:05 PM Aug 17, 2021 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ಫ‌ಲಿತಾಂಶ ತಿರಸ್ಕರಿಸಿರುವ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಆ. 19ರಿಂದ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ.ಆ. 19ರಿಂದ ಸ.3ರ ವರೆಗೆ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

Advertisement

18,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 17,469 ಖಾಸಗಿ ವಿದ್ಯಾರ್ಥಿಗಳು, 352 ಪುನರಾವರ್ತಿತ ಹಾಗೂ 593 ಫ‌ಲಿತಾಂಶ ತಿರಸ್ಕರಿಸಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲೂಕಿಗೆ ಒಂದರಂತೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಪರೀಕ್ಷಾ ಕೇಂದ್ರ ರಚಿಸಿ, 187 ಪರೀûಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಮಹಾರಾಷ್ಟ್ರ, ಕೇರಳ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಆರ್‌ಟಿಪಿಸಿಆರ್‌ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯ ಮಾಡಲಾಗಿದೆ. ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ 72 ಗಂಟೆಗಳ ನೆಗೆಟಿವ್‌ ರಿಪೋರ್ಟ್‌ ತರಬೇಕಿದೆ. ಗಡಿಭಾಗದ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಬೆಳಗಾವಿ ಹಾಗೂ ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆಯ ನೆಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next