ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ಪಡೆದಿದ್ದಾರೆ.
ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಪಿಯುಸಿ ಫಲಿತಾಂಶ ಪ್ರಕಟ ಮಾಡಿದರು.
ಎಸ್ಎಸ್ ಎಲ್ ಸಿ, ಪ್ರಥಮ ಪಿಯುಸಿ ಮತ್ತು ಕೃಪಾಂಕ ಅಂಕ ಸೇರಿಸಿ ಈ ಬಾರಿ ಫಲಿತಾಂಶ ನೀಡಲಾಗಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಅಗತ್ಯವಿಲ್ಲ. ನೋಂದಾವಣಿ ಮಾಡಿದ ಮೊಬೈಲ್ ಸಂಖ್ಯೆಗೆ ಫಲಿತಾಂಶವು ಸಂದೇಶ ರೂಪದಲ್ಲಿ ಬರುತ್ತದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ:ಎಜೆನ್ಸಿಯಿಂದ ಆಗಿರುವ ಪ್ರಮಾದ, ಉದ್ದೇಶ ಪೂರ್ವಕ ಮಾಡಿಲ್ಲ: ಶಶಿಕಲಾ ಜೊಲ್ಲೆ ಸ್ಪಷ್ಟನೆ
ಈ ಬಾರಿ ದ್ವಿತೀಯ ಪಿಯುಸಿಯಲ್ಲಿ6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.
450706 ಮಂದಿ ವಿದ್ಯಾರ್ಥಿಗಳು ಈ ಬಾರಿ ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
147055 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
68729 ವಿದ್ಯಾರ್ಥಿಗಳು ಜಸ್ಟ್ ಪಾಸ್.
600ರಲ್ಲಿ 600 ಅಂಕಗಳನ್ನು ಗಳಿಸಿದ ಅತ್ಯುನ್ನತ ಐದು ಜಿಲ್ಲೆಗಳು
ದಕ್ಷಿಣ ಕನ್ನಡ- 445 ವಿದ್ಯಾರ್ಥಿಗಳು
ಬೆಂಗಳೂರು ದಕ್ಷಿಣ – 302 ವಿದ್ಯಾರ್ಥಿಗಳು
ಬೆಂಗಳೂರು ಉತ್ತರ- 261 ವಿದ್ಯಾರ್ಥಿಗಳು
ಉಡುಪಿ- 149 ವಿದ್ಯಾರ್ಥಿಗಳು
ಹಾಸನ- 104 ವಿದ್ಯಾರ್ಥಿಗಳು