Advertisement
ವಿಜ್ಞಾನ ವಿಭಾಗದಲ್ಲಿ 2,203 ವಿದ್ಯಾರ್ಥಿಗಳು, 2,589 ವಿದ್ಯಾರ್ಥಿನಿಯರು ಒಟ್ಟು 4,792, ವಾಣಿಜ್ಯ ವಿಭಾಗದಲ್ಲಿ 3,935 ವಿದ್ಯಾರ್ಥಿಗಳು ಹಾಗೂ 3,915 ವಿದ್ಯಾರ್ಥಿನಿಯರು ಸೇರಿ ಒಟ್ಟು 7,850 ಮತ್ತು ಕಲಾ ವಿಭಾಗದಲ್ಲಿ 796 ವಿದ್ಯಾರ್ಥಿಗಳು ಹಾಗೂ 728 ವಿದ್ಯಾರ್ಥಿನಿಯರು ಸೇರಿ ಒಟ್ಟು 1,524 ವಿದ್ಯಾರ್ಥಿಗಳು ಇದ್ದಾರೆ.
Related Articles
Advertisement
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸ್ ಆ್ಯಪ್ ಗ್ರೂಪ್‌ಗ್ಳಲ್ಲಿ ಈ ಹಿಂದೆ ಪರೀಕ್ಷೆಗಳಲ್ಲಿ ಬಳಸಿರುವ ಪ್ರಶ್ನೆ ಪತ್ರಿಕೆಗಳು, ಕೈ ಬರಹ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಿ, ವದಂತಿಗಳನ್ನು ಹಬ್ಬಿಸಿ, ವಿದ್ಯಾರ್ಥಿ, ಪೋಷಕರು ಹಾಗೂ ಸಾರ್ವಜನಿಕರಿಗೆ ವಿನಾಕಾರಣ ಗೊಂದಲ ಸೃಷ್ಟಿಸಿದ್ದಲ್ಲಿ ಅಂತಹವರ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಯು ಮಾರುತಿ, ಡಿಡಿಪಿಐ ಗೋವಿಂದ ಮಡಿವಾಳ ಉಪಸ್ಥಿತರಿದ್ದರು.
ಅಕ್ರಮಗಳು: ಗರಿಷ್ಠ ಶಿಕ್ಷೆಯ ಎಚ್ಚರಿಕೆ
ಪರೀಕ್ಷೆ ಅಕ್ರಮಗಳಾದ ಪ್ರಶ್ನೆ ಪತ್ರಿಕೆ ಸೋರಿಕೆ, ಅವುಗಳ ಖರೀದಿ ಮತ್ತು ಮಾರಾಟ, ಮೊಬೈಲ್ ಫೋನ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಮುಖಾಂತರ ಪ್ರಶ್ನೆ ಪತ್ರಿಕೆ ಸೋರಿಕೆಗೆ ವಿದ್ಯಾರ್ಥಿ ಹಾಗೂ ವ್ಯಕ್ತಿಗಳೊಂದಿಗೆ ಸಹಕರಿಸುವುದು, ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹರಡುವುದು, ಅಕ್ರಮಕ್ಕೆ ಪ್ರೇರೇಪಿಸುವುದು ಮತ್ತು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಈ ಅಕ್ರಮಗಳಲ್ಲಿ ಭಾಗಿಯಾದ ವ್ಯಕ್ತಿಗಳಿಗೆ 5 ವರ್ಷಗಳ ಕಾಲ ಜೈಲುವಾಸ, 5 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.