Advertisement

ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ

08:52 AM Apr 22, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ (ಎ.22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಒಟ್ಟು 1,076 ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ.

Advertisement

ಈ ಬಾರಿ ವಿದ್ಯಾರ್ಥಿಗಳ  ಜತೆಗೆ ಪರೀಕ್ಷಾ ಸಿಬಂದಿಗೂ ವಸ್ತ್ರ ಸಂಹಿತೆ ನಿಯಮ ಅನ್ವಯವಾಗಲಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಸರಳ ಉಡುಗೆಯಲ್ಲಿ ಬರಬೇಕು. ಧಾರ್ಮಿಕ ಉಡುಗೆ ತೊಡುಗೆಗಳನ್ನು ನಿಷೇಧಿಸಲಾಗಿದೆ ಎಂದು ಪಿಯು ಇಲಾಖೆ ತಿಳಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಪ್ರಶ್ನೆಪತ್ರಿಕೆಗಳನ್ನು ಇಡುವ ಖಜಾನೆಯ ಒಳಗೆ ಹಾಗೂ ಹೊರಗೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಅಕ್ರಮಗಳು ನಡೆದರೆ ಮಾಹಿತಿ ನೀಡಲು ಇಲಾಖೆಯು ಸಹಾಯವಾಣಿ 080-23080864 ತೆರೆಯಲಾಗಿದ್ದು, ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ  ಕರೆ ಮಾಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next