Advertisement

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್

03:38 PM Jun 17, 2022 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶನಿವಾರ (ಜೂನ್.18) ದಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಎಪ್ರಿಲ್ 22ರಿಂದ ಮೇ 18ರವರೆಗೆ ನಡೆದಿತ್ತು.

ಇದನ್ನೂ ಓದಿ:ಅಗ್ನಿಪಥ್ ಯೋಜನೆಗೆ ವಿರೋಧ: ತೆಲಂಗಾಣದಲ್ಲಿ ಹಿಂಸಾಚಾರ, ಓರ್ವ ಸಾವು, 15 ಮಂದಿಗೆ ಗಾಯ

2021-22ನೇ ಸಾಲಿನಲ್ಲಿ, ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next