Advertisement
ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 1,75,905 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದರೆ ಶೇ. 37.08 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ.
Related Articles
Advertisement
ಫಲಿತಾಂಶ ನೋಡಲು //karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ಲಾಗಿನ್ ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಜತೆಗೆ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.