Advertisement

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಪರಿಶೀಲಿಸುವುದು ಹೇಗೆ?

12:49 PM Sep 12, 2022 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಶೇ. 37.08 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.

Advertisement

ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. 1,75,905 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 65,233 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಂದರೆ ಶೇ. 37.08 ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ:ಜ್ಞಾನವಾಪಿ ಮಸೀದಿ ಪ್ರಕರಣ; ಸೆ.12ರಂದು ಕೋರ್ಟ್ ಆದೇಶ..ವಾರಾಣಸಿಯಲ್ಲಿ ಬಿಗಿ ಬಂದೋಬಸ್ತ್

ಫಲಿತಾಂಶ ನೋಡುವುದು ಹೇಗೆ?:

Advertisement

ಫಲಿತಾಂಶ ನೋಡಲು //karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ಲಾಗಿನ್  ವಿವರಗಳನ್ನು ನಿಗದಿತ ಸ್ಥಳದಲ್ಲಿ ಹಾಕಬೇಕು. ಅಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶವು ಎಂದು ತೋರಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಜತೆಗೆ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಲು ಸಹ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next